ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 14, 2017
ಮಳೆ ಇದೆ ಮಾರಾಯ್ರೆ
ಬೆಂಗಳೂರು: ರಾಜ್ಯಾದ್ಯಂತ ವರ್ಷಧಾರೆ ಮುಂದುವರಿದಿದೆ. ಉತ್ತರ ಕನರ್ಾಟಕ, ಹಳೆ ಮೈಸೂರು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕೆರೆ- ಕಟ್ಟೆಗಳು ತುಂಬಿ ಕೋಡಿ ಹರಿದಿವೆ. ಬಳ್ಳಾರಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿದ್ದು, ಹಳ್ಳ-ಕೊಳ್ಳಗಳೆಲ್ಲ ತುಂಬಿ ಹರಿದಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವುದಲ್ಲದೆ ಹಲವು ಮನೆಗಳು ಕುಸಿದುಬಿದ್ದಿವೆ. ಯಾವುದೇ ಪ್ರಾಣಾ ಪಾಯವಾಗಿಲ್ಲ. ಚಿತ್ರದುರ್ಗದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಮಲ್ಲಾಪುರ ಕೆರೆ ತುಂಬಿ ಹರಿದಿದೆ. ನಗರದೆಲ್ಲೆಡೆ ಸುರಿದ ಭಾರೀ ಮಳೆಗೆ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ನಿನ್ನೆ ಕೋಲಾರ ದಲ್ಲಿ ಸುರಿದ ಮಳೆಗೆ ನರಸಾಪುರ ಕೆರೆ ಭತರ್ಿ ಯಾಗಿದೆ.ಬರದ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು, ಸಾರ್ವಜನಿಕರು ಸಂತಸಗೊಂಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ನಿನ್ನೆ ಸುರಿದ ಮಳೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಡಿದರು. ಟ್ರಾಫಿಕ್ ಸಮಸ್ಯೆ ಉಂಟಾಗಿ ಗಂಟೆಗಟ್ಟಲೆ ವಾಹನಗಳಲ್ಲಿ ಮಳೆಯಲ್ಲೇ ನಿಂತಿದ್ದು ಕಂಡುಬಂತು. ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುತ್ತಿದ್ದರು.
ಮೈಸೂರಿನ ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಜಲಾಶಯ ಭತರ್ಿಯಾಗತೊಡಗಿದೆ. ಕಬಿನಿ, ಕೆಆರೆಸ್, ಹೇಮಾವತಿ, ಹಾರಂಗಿ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಮಸ್ಕಿ ಜಲಾಶಯ ಭತರ್ಿಯಾಗಿದ್ದು, ಜಲಾಶಯದ ಏಳು ಕ್ರೆಸ್ಗೇಟ್ನಿಂದ ನೀರನ್ನು ಹೊರಬಿಡಲಾಗುತ್ತಿದೆ. ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ನದಿಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಹಲವರನ್ನು ಸ್ಥಳಾಂತರ ಮಾಡಲಾಗಿದೆ. ಅಲ್ಲಿನ ಜನರ ನೆರವಿಗೆ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ದಾವಿಸಿದ್ದಾರೆ.
ಉತ್ತರ ಕನರ್ಾಟಕದಲ್ಲಿ ಮಳೆಯೂ ಮುಂದುವರಿದಿರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.