ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 08, 2017
ನಿದರ್ಿಷ್ಟ ದಾಳಿ: ಭಾರತಕ್ಕೆ ಪಾಕ್ ಎಚ್ಚರಿಕೆ
ವಾಷಿಂಗ್ಟನ್: ಪಾಕಿಸ್ತಾನದ ವಿರುದ್ದ ಭಾರತ ನಿದರ್ಿಷ್ಟ ದಾಳಿ ನಡೆಸುವುದು ಅಥವಾ ಅಣ್ವಸ್ತ್ರ ಪರೀಕ್ಷೆ ಗುರಿಯಾಗಿರಿಸಿಕೊಂಡು ದಾಳಿ ನಡೆಸುವುದನ್ನು ಸಹಿಸಲಾಗುವುದಿಲ್ಲಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಖ್ವಾಜಾ ಮೊಹಮ್ಮದ್ ಅಸೀಫ್ ಎಚ್ಚರಿಕೆ ನೀಡಿದ್ದಾರೆ.
ನೆರೆಯ ರಾಷ್ಟ್ರಗಳ ಜತೆಗೆ ಶಾಂತಿ, ಸೌಹಾರ್ದದಿಂದ ಇರಬೇಕು ಎಂದು ಪಾಕಿಸ್ತಾನ ಬಯಸುತ್ತದೆ. ಆದರೆ, ಒಂದು ವೇಳೆ ಪಾಕಿಸ್ತಾನದ ವಿರುದ್ಧ ಭಾರತ ದಾಳಿ ನಡೆಸಿದರೆ, ಪಾಕಿಸ್ತಾನ ಪ್ರತ್ಯುತ್ತರ ನೀಡಬಾರದು ಎಂದು ಯಾರೂ ನಿರೀಕ್ಷಿಸಬಾರದು ಎಂದು ಅವರು ಹೇಳಿದ್ದಾರೆ.
ಭಾರತದ ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ಅವರ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.ಬಾಂಧವ್ಯ ವೃದ್ಧಿಗೊಳಿಸುವ ಯತ್ನಕ್ಕೆ ಭಾರತ ಪ್ರತಿಕ್ರಿಯಿಸಿಲ್ಲ. ಕಾಶ್ಮೀರದಲ್ಲಿ ನಡೆಯುತ್ತಿರುವ ಸಂಗತಿಗಳು, ಸಹಜ ಮಾತುಕತೆಗೆ ಅಡ್ಡಿಯಾಗಿದೆ ಎಂದು ಅವರು ಹೇಳಿದ್ದಾರೆ.
.............