ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 11, 2017
ಮಂಜೇಶ್ವರ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ ಗಾಂಧಿನಗರ, ಮಂಗಳೂರು ಇದರ ಆಶ್ರಯದಲ್ಲಿ ಭಾರತೀಯ ಫೋಟೋಗ್ರಾಫರ್ಸ್ ಮತ್ತು ವೀಡಿಯೋಗ್ರಾಫ್ರರ್ ಸಂಘ ,ಕಾರುಣ್ಯ ಸೇವಾ ಪ್ರತಿಷ್ಠಾನ ಟ್ರಸ್ಟ್ ಉದ್ಯಾವರ ಮಾಡ ಇವರ ಸಹಕಾರದೊಂದಿಗೆ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದರ ತಂಡದವರಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು ಅ. 15 ರಂದು ಭಾನುವಾರ ಬೆಳಿಗ್ಗೆ 9.30 ರಿಂದ 12.30ರ ವರೆಗೆ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಾಡದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಚರ್ಮ, ಎಲುಬು, ಕಣ್ಣು, ಮಕ್ಕಳ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಸ್ತ್ರೀ ರೋಗ ಚಿಕಿತ್ಸೆ ಮತ್ತು ಸಾಮಾನ್ಯ ತಪಾಸಣೆ ಹಾಗೂ ದಂತ ತಪಾಸಣೆ ಮತ್ತು ಚಿಕಿತ್ಸೆ ನಡೆಯಲಿರುವುದು. ಡಾ. ಮೋಹನ್ಸ್ ಡಯಾಬಿಟಿಕ್ ಸ್ಪೆಶಾಲಿಟಿ ಸೆಂಟರ್, ಮಂಗಳೂರು ಇವರಿಂದ ಉಚಿತ ರಕ್ತ ತಪಾಸಣೆ ಮಾಡಲಾಗುವುದು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು. ಹಾಗೂ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುವುದು. ಸೀಳು ತುಟಿ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಭಾರತೀಯ ಫೋಟೋಗ್ರಾಫರ್ಸ್ ಮತ್ತು ವೀಡಿಯೋಗ್ರಾಫರ್ಸ್ ಸಂಘ (ಬಿ.ಎಮ್.ಎಸ್.) ಉಪ್ಪಳ ಘಟಕ, ಕಾರುಣ್ಯ ಸೇವಾ ಪ್ರತಿಷ್ಠಾನ ಟ್ರಸ್ಟ್ ಉದ್ಯಾವರ ಮಾಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.