ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 11, 2017
ಕಾಶ್ಮೀರ' ಪ್ರಸ್ತಾಪ: ಪಾಕಿಸ್ತಾನದ ವಿರುದ್ಧ ಭಾರತ ಕಿಡಿ
ವಿಶ್ವಸಂಸ್ಥೆ: ಕಾರ್ಯಸೂಚಿಯಲ್ಲಿ ಇಲ್ಲದಿದ್ದರೂ ಪಾಕಿಸ್ತಾನವು ಕಾಶ್ಮೀರ ವಿಷಯವನ್ನು ಪದೇ ಪದೇ ಪ್ರಸ್ತಾಪಿಸುತ್ತಿದೆ ಎಂದು ಭಾರತ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.
`ಕಾಶ್ಮೀರ ವಿವಾದಕ್ಕೆ ಪರಿಹಾರ ಕಂಡುಕೊಳ್ಳದ ಹೊರತು ವಿಶ್ವಸಂಸ್ಥೆಯ ಕಾರ್ಯಸೂಚಿಯು ಪೂರ್ಣಗೊಳ್ಳುವುದಿಲ್ಲ' ಎಂದು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಕಾಯಂ ಪ್ರತಿನಿಧಿ ಮಲೀಹಾ ಲೋಧಿ ಆರೋಪಿಸಿದ್ದರು.
ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ನಿಯೋಗದ ಸಚಿವ ಶ್ರೀನಿವಾಸ ಪ್ರಸಾದ್ ಅವರು ಪಾಕಿಸ್ತಾನದ ಆರೋಪವನ್ನು ಖಂಡಿಸಿದ್ದಾರೆ. `ಇದು ನಿಗದಿತ ಕಾರ್ಯಸೂಚಿಯ ದಿಕ್ಕು ತಪ್ಪಿಸುವ ಕೆಲಸ ಎಂದು ಭಾರತ ಭಾವಿಸುತ್ತದೆ' ಎಂದು ಹೇಳಿದ್ದಾರೆ