HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ದಯಾಮರಣ ಕರಡು ಮಸೂದೆ ಸಿದ್ಧ: ಕೇಂದ್ರ ನವದೆಹಲಿ: ದೀರ್ಘ ಕಾಲದ ವಾಸಿಯಾಗದ ಕಾಯಿಲೆಗಳಿಂದ ಮರಣಶಯ್ಯೆಯಲ್ಲಿರುವ ರೋಗಿಗಳಿಗೆ ಪರೋಕ್ಷವಾಗಿ ಮರಣಕ್ಕೆ ಅನುವು ಮಾಡಿಕೊಡುವ ನಿಷ್ಕ್ರಿಯ ಇಚ್ಛಾಮರಣ ಅಥವಾ ದಯಾಮರಣಕ್ಕೆ ಸಂಬಂಧಿಸಿದ ಕರಡು ಮಸೂದೆಯನ್ನು ರೂಪಿಸಿರುವುದಾಗಿ ಕೇಂದ್ರ ಸಕರ್ಾರ ಮಂಗಳವಾರ ಸುಪ್ರೀಂ ಕೋಟರ್್ಗೆ ತಿಳಿಸಿದೆ. ವಾಸಿಯಾಗದ ಭೀಕರ ಕಾಯಿಲೆಗೆ ತುತ್ತಾದ ಆದರೆ, ಮಾನಸಿಕವಾಗಿ ಸದೃಢವಾಗಿರುವ ವ್ಯಕ್ತಿಗೆ ಜೀವ ರಕ್ಷಕ ವೈದ್ಯಕೀಯ ಸವಲತ್ತು ನಿರಾಕರಿಸುವ ಹಕ್ಕು ನೀಡಬೇಕು ಎಂಬ ಕೋರಿಕೆಯನ್ನು ಕೇಂದ್ರ ಸಕರ್ಾರ ಬಲವಾಗಿ ವಿರೋಧಿಸಿತು. ಇದು ದುರ್ಬಳಕೆಯಾಗುವ ಸಾಧ್ಯತೆಯೇ ಹೆಚ್ಚು ಎಂದು ವಾದಿಸಿತು. ಕಳೆದ ವರ್ಷ ಜೂನ್ನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಸಿದ್ಧಪಡಿಸಿದ ದಯಾಮರಣ ಕರಡು ಮಸೂದೆಯನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಅವರು ಮುಖ್ಯ ನ್ಯಾಯಮೂತರ್ಿ ನೇತೃತ್ವದ ಐವರು ನ್ಯಾಯಮೂತರ್ಿಗಳ ಪೀಠಕ್ಕೆ ಸಲ್ಲಿಸಿದರು. ಭಾರತೀಯ ಕಾನೂನು ಆಯೋಗದ ವರದಿಯ ಶಿಫಾರಸುಗಳ ಆಧಾರದ ಮೇಲೆ ಈ ಕರಡು ಮಸೂದೆಯನ್ನು ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದರು.ಸುಪ್ರೀಂ ಕೋಟರ್್ ಪ್ರಕರಣದ ವಿಚಾರಣೆಯನ್ನು ಬುಧವಾರ ಮತ್ತೆ ಕೈಗೆತ್ತಿಕೊಳ್ಳಲಿದೆ. ಸಾವಿನ ಸನಿಹದಲ್ಲಿರುವ ಹಾಗೂ ಬದುಕುವ ಭರವಸೆ ಕ್ಷೀಣವಾಗಿರುವ ವ್ಯಕ್ತಿಗೆ ಸ್ವ ಇಚ್ಛೆಯ ದಯಾಮರಣ ಕರುಣಿಸಲು ಕರಡು ಮಸೂದೆ ಅವಕಾಶ ಕಲ್ಪಿಸಲಿದೆ.ವೈದ್ಯಕೀಯ ಚಿಕಿತ್ಸೆಯನ್ನು ರೋಗಿ ತಡೆಹಿಡಿದರೆ ಅಥವಾ ಅದರಿಂದ ಹಿಂದೆ ಸರಿದರೆ ವೈದ್ಯರಿಗೆ ಹೊಣೆಗಾರಿಕೆಯಿಂದ ರಕ್ಷಣೆ ನೀಡುವ ಮಹತ್ವದ ಅಂಶ ಈ ಮಸೂದೆಯಲ್ಲಿದೆ. ಹಿನ್ನೆಲೆ: 2008ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅಜರ್ಿ ಸಲ್ಲಿಸಿದ್ದ 'ಕಾಮನ್ ಕಾಸ್' ಸಕರ್ಾರೇತರ ಸಂಘಟನೆಯು, ಭೀಕರ ಕಾಯಿಲೆಗೆ ತುತ್ತಾಗಿ ಚೇತರಿಕೆ ಅಸಾಧ್ಯ ಎಂಬ ಸ್ಥಿತಿಗೆ ತಲುಪಿದ ರೋಗಿಗೆ ಜೀವ ರಕ್ಷಕ ವೈದ್ಯಕೀಯ ಸವಲತ್ತು ನಿರಾಕರಿಸುವ ಹಕ್ಕನ್ನು ನೀಡಬೇಕು. ಇಲ್ಲದೇ ಇದ್ದಲ್ಲಿ ಆತನ ವೇದನೆಯನ್ನು ಸುದೀರ್ಘಗೊಳಿಸುತ್ತದೆ ಎಂದು ವಾದಿಸಿತ್ತು. ಕೃತಕ ಜೀವರಕ್ಷಕ ವೈದ್ಯಕೀಯ ನೆರವು ಮುಂದುವರೆಸಬಾರದು ಎಂಬ ಕೋರಿಕೆಯನ್ನು ವಿರೋಧಿಸಿದ್ದ ಕೇಂದ್ರ ಸಕರ್ಾರವು ಇದನ್ನು 'ಆತ್ಮಹತ್ಯೆ'ಗೆ ಸಮ ಎಂದು ವಾದಿಸಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂಕೋಟರ್್ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕಾನೂನು ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿತ್ತು. ಅಜರ್ಿದಾರರ ಪರ ವಕೀಲ ಪ್ರಶಾಂತ ಭೂಷಣ್ ಅವರು, ಕೃತಕ ಜೀವರಕ್ಷಕ ವೈದ್ಯಕೀಯ ಸವಲತ್ತುಗಳ ಮೂಲಕ ಸಾವಿನ ಸನಿಹದಲ್ಲಿರುವ ವ್ಯಕ್ತಿಯ ಜೀವ ರಕ್ಷಿಸುವ ಯತ್ನ ವ್ಯಕ್ತಿಯ ಸಹಜ ಆಯುಸ್ಸನ್ನು ಅಸಹಜ ರೀತಿಯಲ್ಲಿ ವೃದ್ಧಿಸುವ ಕ್ರಮವಾಗುತ್ತದೆ ಎಂದು ವಾದ ಮಂಡಿಸಿದ್ದರು. ದಶಕಗಳ ಕಾಲ ಮರಣಶಯ್ಯೆಯಲ್ಲಿದ್ದ ಕನರ್ಾಟಕ ಮೂಲದ ಶುಶ್ರೂಷಕಿ ಮತ್ತು ಮುಂಬೈ ನಿವಾಸಿ ಅರುಣಾ ಶಾನುಭಾಗ್ ಅವರು ದಯಾಮರಣ ಕೋರಿ ಮೊದಲ ಬಾರಿಗೆ ಅಜರ್ಿ ಸಲ್ಲಿಸಿದ್ದರು. ಆದರೆ, 2011ರಲ್ಲಿ ಸುಪ್ರೀಂ ಕೋಟರ್್ ಅರುಣಾ ಅವರ ದಯಾಮರಣ ಬೇಡಿಕೆಯನ್ನು ನಿರಾಕರಿಸಿತ್ತು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries