ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 01, 2017
62ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದ ಮುಖ್ಯಮಂತ್ರಿಗಳು
ಬೆಂಗಳೂರು: 62ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾಜರ್್, ಆರ್.ರೋಶನ್ ಬೇಗ್, ತನ್ವೀರ್ ಸೇಠ್ ಹಾಗೂ ಮೇಯರ್ ಸಂಪತ್ ರಾಜ್ ಉಪಸ್ಥಿತರಿದ್ದರು.