ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 29, 2017
ಬಾಬಾ ಜನ್ಮ ದಿನಾಚರಣೆ
ಉಪ್ಪಳ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 92ನೇ ಜನ್ಮದಿನೋತ್ಸವವು ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಇತ್ತೀಚೆಗೆ ಜರುಗಿತು.
ಓಂಕಾರ ಸುಪ್ರಭಾತ, ನಗರ ಸಂಕೀರ್ತನೆ, ನಗರ ಶುಚಿತ್ವದೊಂದಿಗೆ ಆರಂಭಗೊಂಡ ಕಾರ್ಯಕ್ರಮವು ವೇದಮೂತರ್ಿ ಅನಂತನಾರಾಯಣ ಭಟ್ ಪರಕ್ಕಜೆ ಇವರ ನೇತೃತ್ವದಲ್ಲಿ ಶ್ರೀ ಸತ್ಯಸಾಯಿಪೂಜೆ, ಶ್ರೀ ಸ್ವಾಮಿಗೆ ಜಲೋತ್ಸವ ಕಾರ್ಯಕ್ರಮ ನೆರವೇರಿತು. ಇದೇ ಸಂದರ್ಭದಲ್ಲಿ ಶಾಲೆಯ ಕನ್ನಡ ಸಂಘದ ಹಸ್ತಪ್ರತಿಯಾದ 'ಬೆಳಕ'ನ್ನು ವೇದಮೂತರ್ಿ ಅನಂತನಾರಾಯಣ ಭಟ್ ಪರಕ್ಕಜೆ ಈ ಸಂದರ್ಭ ಬಿಡುಗಡೆಗೊಳಿಸಿ ಮಕ್ಕಳಿಗೆ ಹಿತವಚನಗಳನ್ನು ನೀಡಿದರು. ಅಪರಾಹ್ನ ಗಿರೀಶ್ ರೈ ಕಕ್ಕೆಪದವು ಮತ್ತು ಬಳಗದವರಿಂದ 'ಭರತಾಗಮನ' ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಸಂಜೆ 6 ರಿಂದ ಭಜನೆ ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.