ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 29, 2017
ಕುಂಬಳೆಯಲ್ಲಿ ಕೆ. ಟೆಟ್ ತರಬೇತಿ
ಕುಂಬಳೆ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘಟನೆಯು ನಡೆಸುವ ಕೆ.ಟೆಟ್ ತರಬೇತಿಯು ಸರಕಾರಿ ಪ್ರೌಢ ಶಾಲೆ ಕುಂಬಳೆಯಲ್ಲಿ ಶನಿವಾರ ಆರಂಭಿಸಲಾಯಿತು. ಕಾರ್ಯಕ್ರಮವನ್ನು ಕುಂಬಳೆ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಉದಯಕುಮಾರಿ ಅವರು ಉದ್ಘಾಟಿಸಿ ಅಧ್ಯಾಪಕ ಸಂಘಟನೆಯು ನಡೆಸುವ ಈ ತರಬೇತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪರೀಕ್ಷೆಯಲ್ಲಿ ಉತ್ತಮ ಅಂಕಗಳು ಲಭಿಸಲಿ ಎಂದು ಶುಭ ಹಾರೈಸಿದರು.
ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ರಾಜ್ಯ ಅಧ್ಯಕ್ಷ ರವೀಂದ್ರನಾಥ್ ಕೆ.ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇರಳ ರಾಜ್ಯದಲ್ಲಿ ಶಿಕ್ಷಕರಿಗೆ ತರಬೇತಿಯನ್ನು ನೀಡುವ ಏಕೈಕ ಅಧ್ಯಾಪಕ ಸಂಘಚನೆಯಾಗಿದೆ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕುಂಬಳೆ ಗ್ರಾಮ ಪಂಚಾಯತಿ ಅಧ್ಯಕ್ಷ ಪುಂಡರೀಕಾಕ್ಷ ಕೆ.ಎಲ್. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅಧ್ಯಾಪಕ ಸಂಘಟನೆಯ ಪೂರ್ವ ಅಧ್ಯಕ್ಷರೂ ನಿವೃತ್ತ ಶಿಕ್ಷಕ ಮಹಾಲಿಂಗೇಶ್ವರ ಭಟ್ ಎಂ.ವಿ, ಕೆ. ಟೆಟ್ ತರಬೇತಿಯ ಆವಶ್ಯಕತೆಯ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಪ್ರದೀಪ್ ಕುಮಾರ್ ಬೇಳ, ಕಮಲಾಕ್ಷ ನಾಯಕ್, ತೆಕ್ಕೆಕರೆ ಶಂಕರನಾರಾಯಣ ಭಟ್ ಉಪಸ್ಥಿತರಿದ್ದು ಶುಭಹಾರೈಸಿದರು. ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಪ್ರಧಾನ ಕಾರ್ಯದಶರ್ಿ ಕುಮಾರ ಸುಬ್ರಹ್ಮಣ್ಯ ಸ್ವಾಗತಿಸಿ, ಜಬ್ಬಾರ್ ಮಾಸ್ಟರ್ ವಂದಿಸಿದರು.