ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 08, 2017
ದೆಹಲಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ: ಶಾಲೆಗಳಿಗೆ ರಜೆ ನೀಡುವಂತೆ ಕೇಜ್ರಿವಾಲ್ ಸೂಚನೆ
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸುವಂತೆ ಸಚಿವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಸೂಚನೆ ನೀಡಿದ್ದಾರೆ.
ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ವಾಯುಮಾಲಿನ್ಯ ಹಿನ್ನಲೆಯಲ್ಲಿ ಕೆಲ ದಿನಗಳ ಕಾಲ ಶಾಲೆಗಳಿಗೆ ರಜೆ ನೀಡುವಂತೆ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಪ್ರತೀ ವರ್ಷ ಇದೇ ಸಂದರ್ಭದಲ್ಲಿ ರಾಜಧಾನಿ ದೆಹಲಿಯಲ್ಲಿ ತಿಂಗಳುಗಟ್ಟಲೇ ವಾಯುಮಾಲಿನ್ಯ ತೀವ್ರವಾಗಿ ಹದಗೆಟ್ಟಿರುತ್ತದೆ ಎಂದು ತಿಳಿಸಿದ್ದಾರೆ.
ಈ ನಡುವೆ ನ.19ರಂದು ನಡೆಯಲಿರುವ ಏರ್'ಟೆಲ್ ಡೆಲ್ಲಿ ಹಾಫ್ ಮ್ಯಾರಥಾನ್ ರದ್ದು ಪಡಿಸಬೇಕೆಂದು ವೈದ್ಯರ ಸಂಘ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದಾರೆ.