ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 29, 2017
ಡಿ.2ರಂದು ದಾಮೋದರ ಪುಣಿಂಚತ್ತಾಯ ಸಂಸ್ಮರಣೆ
ಮುಳ್ಳೇರಿಯ: ಪುಂಡೂರು ದಾಮೋದರ ಪುಣಿಂಚತ್ತಾಯ ಅವರ ಸಂಸ್ಮರಣಾ ಕಾರ್ಯಕ್ರಮ ಡಿಸೆಂಬರ್ 2ರಂದು ಬೆಳಿಗ್ಗೆ 11.30ರಿಂದ ಪುಂಡೂರು ನೀರ್ಮಜೆ ಸರಸ್ವತಿಧಾಮದಲ್ಲಿ ನಡೆಯಲಿದೆ.
ಪುಂಡೂರು ದಾಮೋದರ ಪುಣಿಂಚತ್ತಾಯ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಸಮಾರಂಭದಲ್ಲಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸತ್ಯನಾರಾಯಣ ತಂತ್ರಿ ಸಂಸ್ಮರಣಾ ಭಾಷಣ ಮಾಡುವರು. ಡಾ.ಡಿ.ಸದಾಶಿವ ಭಟ್ ಅವರಿಗೆ ಅಭಿನಂದನೆ ನಡೆಯಲಿದೆ. ಡಾ.ಬೇ.ಸಿ.ಗೋಪಾಲಕೃಷ್ಣ ಭಟ್ ಅಭಿನಂದನಾ ಭಾಷಣ ಮಾಡುವರು. ಬೆಳ್ಳಿಗೆ ನಾರಾಯಣ ಮಣಿಯಾಣಿ ಉಪಸ್ಥಿತರಿರುವರು. ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2.30ರಿಂದ ನುರಿತ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.