ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣ
ಸಾಧ್ವಿ ಪ್ರಜ್ಞಾ ಸಿಂಗ್, ಪುರೋಹಿತ್ ಆರೋಪ ಕೈಬಿಟ್ಟ ಎನ್ಐಎ ನ್ಯಾಯಾಲಯ
ಮುಂಬೈ: 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ?ಆರೋಪಿಗಳಾದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಮತ್ತು ಇತರೆ ಇಬ್ಬರ ವಿರುದ್ಧ 1999ರ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅನ್ವಯ ಹೊರಿಸಲಾಗಿದ್ದ ದೋಷಾರೋಪವನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ವಿಶೇಷ ನ್ಯಾಯಾಲಯ ಕೈಬಿಟ್ಟಿದೆ.
ಆದರೆ, ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್ಗಳ ಅನ್ವಯ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿದೆ.
2008ರ ಸೆ.29ರಂದು ಮಹಾರಾಷ್ಟ್ರದ ಮಾಲೇಗಾಂವ್ ಪ್ರದೇಶದಲ್ಲಿ ಎರಡು ಕಡೆ ದ್ವಿಚಕ್ರ ವಾಹನ ಬಳಸಿ ಬಾಂಬ್ ಸ್ಫೋಟ ನಡೆಸಲಾಗಿತ್ತು. ಈ ಪ್ರಕರಣದಲ್ಲಿ 7 ಮಂದಿ ಮೃತಪಟ್ಟು,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಪ್ರಕರಣದ ಪ್ರಮುಖ ಆರೋಪಿ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು. ಒಂಬತ್ತು ವರ್ಷಗಳಿಂದ ಜೈಲಿನಲ್ಲಿದ್ದ ಅವರಿಗೆ ಸುಪ್ರೀಂ ಕೋಟರ್್ 2017ರ ಆಗಸ್ಟ್ನಲ್ಲಿ ಜಾಮೀನು ನೀಡಿತ್ತು.
ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಏಪ್ರಿಲ್ನಲ್ಲಿ ಬಾಂಬೆ ಹೈಕೋಟರ್್ ಜಾಮೀನು ನೀಡಿತ್ತು.