ನಾಳೆ ಸಂಸತ್ನಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ
ನವದೆಹಲಿ: ಕೇಂದ್ರ ಸಕರ್ಾರ ಇದೇ 28ರಂದು ಸಂಸತ್ತಿನಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡಿಸಲಿದೆ.
` ಮುಸ್ಲಿಂ ಮಹಿಳಾ (ವೈವಾಹಿಕ ಹಕ್ಕುಗಳ ರಕ್ಷಣೆ) ಮಸೂದೆ' ಮಂಡನೆಯನ್ನು ಡಿ.28ರ ಲೋಕಸಭೆಯ ಕಲಾಪಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.
ಕಳೆದ ವಾರ ಲೋಕಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಮಸೂದೆ ಮಂಡನೆಗೆ ಅವಕಾಶ ನೀಡಲಾಗಿತ್ತು. ಆದರೆ ಮಂಡನೆಯಾಗಿರಲಿಲ್ಲ.
ಮುಸ್ಲಿಂ ಪುರುಷರು ಪತ್ನಿಯರಿಗೆ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡುವುದನ್ನು ಅಪರಾಧ ಎಂದು ಪರಿಗಣಿಸುವ ಮಸೂದೆಗೆ ಕೇಂದ್ರ ಸಂಪುಟ ಕಳೆದ ತಿಂಗಳು ಅನುಮೋದನೆ ನೀಡಿತ್ತು.
ಮುಸ್ಲಿಂ ಪುರುಷ ತನ್ನ ಪತ್ನಿಗೆ ನೇರವಾಗಿ, ಪತ್ರದ ಮೂಲಕ, ಎಸ್ಎಂಎಸ್, ಇ?ಮೇಲ್ ಮತ್ತು ಸಾಮಾಜಿಕ ಜಾಲತಾಣಗಳೂ ಸೇರಿ ಯಾವುದೇ ರೀತಿಯಲ್ಲಿ ತ್ರಿವಳಿ ತಲಾಖ್ ನೀಡುವುದನ್ನು ಈ ಮಸೂದೆ ಅಪರಾಧ ಎಂದು ಪರಿಗಣಿಸುತ್ತದೆ.
ಹೀಗೆ ತಲಾಖ್ ನೀಡುವ ವ್ಯಕ್ತಿಗೆ ಮೂರು ವರ್ಷ ಸೆರೆವಾಸ ಮತ್ತು ದಂಡ ವಿಧಿಸಲು ಮಸೂದೆ ಅವಕಾಶ ಮಾಡಿಕೊಡುತ್ತದೆ.
`ಈ ಮಸೂದೆಯಿಂದ ಮುಸ್ಲಿಂ ಮಹಿಳೆಯರಿಗೆ ತೊಂದರೆಯಾಗುತ್ತದೆ. ಜೈಲಿನಿಂದ ಹಿಂತಿರುಗಿದ ಪತಿ ತನ್ನ ಪತ್ನಿ ಮತ್ತು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಾನೆಯೇ ಎಂಬ ಅನುಮಾನವಿದೆ. ಹೀಗಾಗಿ ಮಸೂದೆ ಮಂಡಿಸಬೇಡಿ' ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ.