ದೆಹಲಿಯಲ್ಲಿ ದಟ್ಟ ಮಂಜು: ವಿಮಾನ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯ
ನವದೆಹಲಿ: ದಟ್ಟ ಮಂಜಿನಿಂದಾಗಿ ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 90 ವಿಮಾನ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.
ಇಲ್ಲಿನ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಹಾಗೂ ಬಂದಿಳಿಯಬೇಕಿದ್ದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. 54 ದೇಶೀಯ ಹಾಗೂ 11 ಅಂತಾರಾಷ್ಟ್ರೀಯ ವಿಮಾನ ಸಂಚಾರದಲ್ಲಿ ವಿಳಂಬವಾಗಿದ್ದು, 17 ದೇಶೀಯ ಮತ್ತು 8 ಅಂತಾರಾಷ್ಟ್ರೀಯ ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ 6.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಸೋಮವಾರವೂ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ದಟ್ಟ ಮಂಜಿನ ಕಾರಣ ಉತ್ತರ ಭಾರತದೆಡೆ ರೈಲು ಸಂಚಾರದಲ್ಲೂ ವ್ಯತ್ಯಯವಾಗಿದ್ದು, 15 ರೈಲುಗಳು ರದ್ದಾಗಿವೆ. 57 ರೈಲುಗಳ ಸಂಚಾರ ವಿಳಂಬವಾಗಿದ್ದು, 18 ರೈಲುಗಳ ವೇಳಾಪಟ್ಟಿಯನ್ನ ಬದಲಿಸಲಾಗಿದೆ.