ಯೋಧರ ಹತ್ಯೆಗೆ ಪ್ರತಿಕಾರ: ಪಾಕ್ ಸ್ನೈಪರ್ನ ಹೊಡೆದುರುಳಿಸಿದ ಭಾರತೀಯ ಯೋಧರು
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಸೇನೆಯ ಮೇಜರ್ ಸೇರಿ ನಾಲ್ವರು ಯೋಧರ ಹತ್ಯೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಯೋಧರು ಪಾಕ್ ಸ್ನೈಪರ್ ಒಬ್ಬನನ್ನು ಹೊಡೆದುರುಳಿಸಿದ್ದಾರೆ.
ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಭಾರತೀಯ ಯೋಧರ ವಿರುದ್ಧ ಗುಂಡು ಹಾರಿಸಲು ಸಿದ್ಧವಾಗುತ್ತಿದ್ದ ಪಾಕ್ ಸ್ನೈಪರ್ ನನ್ನು ಪತ್ತೆ ಹಚ್ಚಿದ ಭಾರತೀಯ ಯೋಧರು ಆತನನ್ನು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕೇರಿ ವಲಯದಲ್ಲಿ ಶನಿವಾರ ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ತಾನ ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಭಾರತ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದರು.
ನಿನ್ನೆ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಪೂಂಛ್ ಜಿಲ್ಲೆಯ ಶಹಾಪುರ್ ಪ್ರದೇಶದಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಏಕಾಏಕಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಯೋಧರೂ ಸಹ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.