HEALTH TIPS

ಯಾವುದೇ ಶೀರ್ಷಿಕೆಯಿಲ್ಲ

Top Post Ad

Click to join Samarasasudhi Official Whatsapp Group

Qries

                   ಲೋಕಸಭೆಯಲ್ಲಿ ದಿವಾಳಿತನ ಸಂಹಿತೆ ತಿದ್ದುಪಡಿ ಮಸೂದೆಗೆ ಅಂಗೀಕಾರ
    ನವದೆಹಲಿ: ದೇಶದಲ್ಲಿ ಕಂಪೆನಿಗಳ ವ್ಯಾಪಾರ, ವಹಿವಾಟಿಗೆ ಅನುಕೂಲವಾಗುವ ದಿವಾಳಿತನ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.
ಲೋಕಸಭೆಯಲ್ಲಿ ದಿವಾಳಿತನ ಮತ್ತು ದಿವಾಳಿತನ ಸಂಹಿತೆ ತಿದ್ದುಪಡಿ 2017ಗೆ ಅಂಗೀಕಾರ ದೊರೆತಿದ್ದು ಇನ್ನು ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಗೊಳ್ಳಬೇಕಿದೆ.
ಪರಿಸ್ಥಿತಿ ಮತ್ತು ದಿವಾಳಿ ನೀತಿಸಂಹಿತೆಯಲ್ಲಿ ಕೆಲ ತಿದ್ದುಪಡಿ ತರಲು ನವೆಂಬರ್ 23ರಂದು ಕೇಂದ್ರ ಸಕರ್ಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಸಣ್ಣ ಹೂಡಿಕೆದಾರರನ್ನು ರಕ್ಷಿಸುವ ಉದ್ದೇಶದಿಂದ ಈ ಸಂಹಿತೆಯನ್ನು ಜಾರಿಗೆ ತರಲಾಗಿತ್ತು. ಕಾಯ್ದೆ ಜಾರಿಯಾಗುವುದಕ್ಕೂ ಮುನ್ನ ಇದ್ದ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದ ಕೆಲವು ಕಾಪರ್ೊರೇಟ್ ಸಂಸ್ಥೆಗಳು ಕಪ್ಪುಹಣವನ್ನು ವ್ಯವಸ್ಥಿತವಾಗಿ ಬಳಕೆ ಮಾಡಿಕೊಳ್ಳುತ್ತಿದ್ದವು. ನೂತನ ಕಾನೂನಿನಿಂದ ನಕಲಿ ಸಂಸ್ಥೆಗಳ ಹೆಸರಿನಲ್ಲಿ ನಡೆಯುವ ಮೋಸದ ಪ್ರಕರಣಗಳನ್ನು ಪ್ರತಿ ಬಂಧಿಸಬಹುದಾಗಿದೆ.
   ಈಗಿರುವ ದಿವಾಳಿತನ ಕಾನೂನನ್ನು ಬದಲಾಯಿಸಿ ದಿವಾಳಿತನದ ಸಮಸ್ಯೆಗಳನ್ನು ಬಗೆಹರಿಸಲು ಕಾಲಮಿತಿ ಒದಗಿಸುತ್ತದೆ. ವ್ಯಕ್ತಿಗಳು, ಕಂಪೆನಿಗಳು, ಬ್ಯಾಂಕು, ಸೀಮಿತ ಹೊಣೆಗಾರಿಕೆ ಸಹಭಾಗಿತ್ವ ಮತ್ತು ಪಾಲುದಾರಿಕೆ ಸಂಸ್ಥೆಗಳು ಹೊಸ ಕಾನೂನು ವ್ಯಾಪ್ತಿಗೆ ಒಳಗೊಳ್ಳುತ್ತದೆ. ಕಂಪೆನಿ ಕಾಯ್ದೆಗೆ ತಿದ್ದುಪಡಿ ತಂದು ಕಾಪರ್ೊರೇಟ್ ದಿವಾಳಿತನ ಎದುರಿಸಲು ಸಹಾಯ ಮಾಡುತ್ತದೆ. ಅಲ್ಲದೆ ಸಾಲ ನೀಡಿದವರು ಬೇಗನೆ ಸಾಲವನ್ನು ವಸೂಲು ಮಾಡಿಕೊಳ್ಳಲು ಸಹಕಾರಿಯಾಗುತ್ತದೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries