ಮೇವು ಹಗರಣ: ಲಾಲುಗೆ 3.5 ವರ್ಷ ಜೈಲು ಶಿಕ್ಷೆ, 5 ಲಕ್ಷ ರೂ. ದಂಡ
ರಾಂಚಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಸಿಬಿಐ ವಿಶೇಷ ಕೋಟರ್್ 3.5 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದು ಲಾಲುಗೆ 3.5 ವರ್ಷ ಜೈಲು ಹಾಗೂ 5 ಲಕ್ಷ ರುಪಾಯಿ ದಂಡ ವಿಧಿಸಿದ್ದಾರೆ.
ಮೇವು ಹಗರಣಕ್ಕೆ ಸಂಬಂಧಿಸಿದ ಆರು ಪ್ರಕರಣಗಳ ಪೈಕಿ ಒಂದು ಪ್ರಕರಣದ 22 ಆರೋಪಿಗಳ ಪೈಕಿ ಲಾಲು ಪ್ರಸಾದ್ ಯಾದವ್ ಸೇರಿ 15 ಆರೋಪಿಗಳು ದೋಷಿ ಎಂದು ರಾಂಚಿ ಸಿಬಿಐ ವಿಶೇಷ ಕೋಟರ್್ ಕಳೆದ ಡಿಸೆಂಬರ್ 23ರಂದು ತೀಪರ್ು ನೀಡಿತ್ತು. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಜನವರಿ 3ಕ್ಕೆ ಕಾಯ್ದಿರಿಸಿತ್ತು. ಆದರೆ ನಿನ್ನೆ ಮೂರನೇ ಬಾರಿಗೆ ತೀರ್ಪನ್ನು ಮುಂದೂಡಿದ್ದು ಇಂದಿಗೆ ತೀರ್ಪನ್ನು ಕಾಯ್ದಿರಿಸಿದ್ದರು.
ಇದೇ ಪ್ರಕರಣ ಸಂಬಂದ ಬಿಹಾರ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಸೇರಿ ಇತರೆ ಏಳು ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಖುಲಾಸೆಗೊಳಿಸಿದ್ದರು.
ದೇವಗಡ ಖಜಾನೆಯಿಂದ 90 ಲಕ್ಷ ರುಪಾಯಿ ಹಣವನ್ನು ಅಕ್ರಮವಾಗಿ ಪಡೆದುಕೊಂಡಿರುವ ಈ ಪ್ರಕರಣದಲ್ಲಿ ಲಾಲು ಹಾಗೂ ಮಿಶ್ರಾ ಸೇರಿ 22 ಮಂದಿ ಆರೋಪಿಗಳಾಗಿದ್ದರು.