ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಐಇಡಿ ಸ್ಫೋಟಕ್ಕೆ 4 ಪೊಲೀಸರ ಬಲಿ
ಕಾಶ್ಮೀರದ ಸೋಪೋರ್ ನಲ್ಲಿ ಘಟನೆ; ತೀವ್ರಗೊಂಡ ಶೋಧ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಐಇಡಿ ಬಾಂಬ್ ಸ್ಫೋಟಗೊಂಡ ಪರಿಣಾಮ 4 ಮಂದಿ ಪೊಲೀಸರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನಲ್ಲಿ ಸುಧಾರಿತ ಸ್ಫೋಟಕ ಸ್ಫೋಟವಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಮೂವರು ಪೊಲೀಸರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯನ್ನು ಹಲವರು ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಇನ್ನು ಘಟನೆ ವಿಚಾರ ತಿಳಿದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಂತೆಯೇ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರಶೋಧ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಉಗ್ರರ ಕೃತ್ಯ ಎಂದು ಶಂಕಿಸಲಾಗುತ್ತಿದ್ದು, ಹೆಚ್ಚಿನ ತನಿಖೆ ಬಳಿಕ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.