ಅಫ್ಘಾನಿಸ್ತಾನದಲ್ಲಿ ಭೂಕಂಪ: 6.1 ತೀವ್ರತೆ; ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಕಂಪನ
ನವದೆಹಲಿ: ರಾಜಧಾನಿ ದೆಹಲಿ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.1ಷ್ಟು ತೀವ್ರತೆ ದಾಖಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ 12.40ಸುಮಾರಿಗೆ ಭೂಮಿ ಕಂಪಿಸಿದ್ದು, ಅಫ್ಘಾನಿಸ್ತಾನದ ಹಿಂದೂಖುಷ್ ಪರ್ವತ ಪ್ರದೇಶದಲ್ಲಿ ಕಂಪನದ ಕೇಂದ್ರಬಿಂದು ಕಂಡುಬಂದಿದೆ. ಭೂಮಿ ಕಂಪಿಸುತ್ತಿದ್ದಂತೆಯೇ ಆತಂಕಗೊಂಡ ಜನರು ಮನೆಗಳಿಂದ ಹೊರಬಂದು ಬೀದಿಗಳಲ್ಲಿ ಗುಂಪಿ ಸೇರಿದ್ದಾರೆ.
ದೆಹಲಿ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ, ಪಾಕಿಸ್ತಾನ, ಆಫ್ಘಾನಿಸ್ತಾನಗಳಲ್ಲಿ ಭೂಮಿ ಕಂಪಿಸಿರುವುದಾಗಿ ವರದಿಗಳು ತಿಳಿಸಿವೆ.