HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                      ಪದೇ ಪದೇ ಒಪ್ಪಂದ ಉಲ್ಲಂಘಿಸುವ ಪಾಕ್ ಜೊತೆ ಕ್ರಿಕೆಟ್ ಅಸಾಧ್ಯ: ಸುಷ್ಮಾ ಸ್ವರಾಜ್
    ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದೆ. ಜತೆಗೆ ಭಯೋತ್ಪಾದನೆಗೂ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಅಸಾಧ್ಯ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಪಾಕಿಸ್ತಾನ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಮೂಲಕ ಭಾರತದಲ್ಲಿ ವಿದ್ವಂಸಕ ಕೃತ್ಯಗಳನ್ನು ಎಸಗಲು ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಜತೆ ಕ್ರಿಕೆಟ್ ಅಸಾಧ್ಯ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
    ಉಭಯ ದೇಶಗಳ ನಡುವೆ ಉಂಟಾಗಿರುವ ಬಿಗುವಿನ ವಾತಾವರಣ ತಿಳಿಗೊಳಿಸಲು ಕ್ರಿಕೆಟ್ ಆಡಲು ಸಕರ್ಾರ ಅವಕಾಶ ನೀಡುತ್ತದಾ ಎಂಬ ಪ್ರಶ್ನೆಗೆ ಉತ್ತರಿಸಿದ ಸುಷ್ಮಾ ಸ್ವರಾಜ್ ಅವರು ಮಾನವೀಯ ನೆಲೆಗಟ್ಟಿನ ಮೇಲೆ ವಯಸ್ಸಾದ ಕೈದಿಗಳನ್ನು ಹಾಗೂ ಮಹಿಳೆಯನ್ನು ಬಿಡುಗಡೆಗೊಳಿಸಬಹುದು ಎಂಬ ಸಲಹೆಗಳು ಬಂದಿವೆ. ಆದರೆ ಕ್ರಿಕೆಟ್ ಆಡಿಸಲು ಸೂಕ್ತ ಸಮಯ ಎಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಪಾಕಿಸ್ತಾನ ಗಡಿಯಲ್ಲಿ ಇದೇ ವರ್ಷದಲ್ಲಿ ಒಟ್ಟು 800 ಬಾರಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಇನ್ನು 2016ರಲ್ಲಿ ಬುವರ್ಾನ್ ವಾನಿಯನ್ನು ಭಾರತೀಯ ಸೇನೆ ಹತ್ಯೆ ಮಾಡಿದಾಗ ಕಾಶ್ಮೀರದಲ್ಲಿ ಹಿಂಸಾತ್ಮಕ ಪ್ರತಿಭಟನೆಗೆ ಕುಮ್ಮಕ್ಕು ನೀಡಿದ್ದರು ಈ ಎಲ್ಲಾ ಅಂಶಗಳನ್ನು ಗಮನಿಸಿ ಈ ನಿಧರ್ಾರ ತೆಗೆದುಕೊಳ್ಳಲಾಗಿದೆ ಎಂದರು.
    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸಿಆರ್'ಪಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದು ಈ ಉಗ್ರ ದಾಳಿಯಲ್ಲಿ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್ ಅವರು ದ್ವಿಪಕ್ಷೀಯ ಕ್ರಿಕೆಟ್ ಕುರಿತಂತೆ ಪಾಕಿಸ್ತಾನಕ್ಕೆ ಖಾರವಾದ ಉತ್ತರ ನೀಡಿದ್ದಾರೆ.
ಇನ್ನು ಮೊನ್ನೆಯಷ್ಟೇ ಸಿಆಪರ್ಿಎಫ್ ತರಬೇತಿ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದು ಈ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.
  ಭಯೋತ್ಪಾದನೆ ವಿರುದ್ಧ ಸಮರ ಸಾರುತ್ತಿರುವುದಾಗಿ ಪಾಕಿಸ್ತಾನ ಬರೀ ಬಾಯಿ ಮಾತಿಗೆ ಹೇಳುತ್ತಿದೆ. ಆದರೆ ಭಾರತದ ಗಡಿಯನ್ನು ನುಸುಳಲು ಭಯೋತ್ಪಾದಕರಿಗೆ ಪಾಕಿಸ್ತಾನ ಸೈನಿಕರು ಬೆಂಬಲ ನೀಡುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕೇಂದ್ರ ಸಕರ್ಾರ ಪಾಕಿಸ್ತಾನ ಜತೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಸುವುದಕ್ಕೆ ನೋ ಎಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries