ಹುತಾತ್ಮ ಸಿಆರ್ ಪಿಎಫ್ ಯೋಧರಿಗೆ ಶ್ರದ್ಧಾಂಜಲಿ; ಲೋಕಸಭೆಯಲ್ಲಿ ಪಾಕ್ ವಿರುದ್ಧ ಘೋಷಣೆ
ನವದೆಹಲಿ: ಡಿ.31 ರಂದು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರಿಗೆ ಲೋಕಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದ್ದು, ಬಿಜೆಪಿ ಸದಸ್ಯರು ಪಾಕ್ ವಿರೋಧಿ ಘೋಷಣೆ ಕೂಗಿದ್ದಾರೆ.
ಸ್ಪೀಕರ್ ಸುಮಿತ್ರಾ ಮಹಾಜನ್ ಲೋಕಸಭೆಗೆ ಆಗಮಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆಯ ಕೃತ್ಯವನ್ನು ಹೇಡಿ ಕೃತ್ಯ ಎಂದು ಸುಮಿತ್ರಾ ಮಹಾಜನ್ ಹೇಳಿದ್ದಾರೆ.
ಕೆಲವು ನಿಮಿಷಗಳು ಮೌನಾಚರಣೆ ಮಾಡುವ ಮೂಲಕ ಸದಸ್ಯರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.