HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             71 ಮಂದಿ ಪ್ರಯಾಣಿಕರಿದ್ದ ರಷ್ಯಾ ಪ್ಯಾಸೆಂಜರ್ ವಿಮಾನ ಪತನ, ಎಲ್ಲ ಪ್ರಯಾಣಿಕರ ಸಾವು!
    ಮಾಸ್ಕೋ: ಸುಮಾರು 71 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನವೊಂದು ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಭಾನುವಾರ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
   ಮಾಸ್ಕೋದ ಡೊಮೊಡೆಡೋವೊ ವಿಮಾನ ನಿಲ್ದಾಣದ ಹೊರ ಆವರಣದಲ್ಲಿ ಅಂಟಾನೋವ್ ಎಎನ್ 148 ವಿಮಾನ ಪತನವಾಗಿದ್ದು, ವಿಮಾನದಲ್ಲಿ 6 ಮಂದಿ ಸಿಬ್ಬಂದಿ ಸೇರಿ ಒಟ್ಟು 71 ಮಂದಿ ಪ್ರಯಾಣಿಕರು ಇದ್ದರು. ಈ ಪೈಕಿ ಎಲ್ಲ ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ  ಎನ್ನಲಾಗಿದೆ.  ಪ್ರಾದೇಶಿಕ ವಿಮಾನಯಾನ ಸಂಸ್ಥೆ ಸರತೋವ್ ಏರ್ ಲೈನ್ಸ್ ಗೆ ಸೇರಿದ ವಿಮಾನ ಎಂದು ತಿಳಿದುಬಂದಿದ್ದು, ವಿಮಾನ ಉರಲ್ಸ್ ನ ಓಸ್ಕರ್್ ನಗರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
  ಮಾಸ್ಕೋ ಹೊರವಲಯದ ರಮೆನ್ ಸ್ಕಿ ಪ್ರಾಂತ್ಯದಲ್ಲಿ ವಿಮಾನ ಪತನವಾಗಿದೆ. ಘಟನಾ ಸ್ಥಳಕ್ಕೆ 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ.
ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries