HEALTH TIPS

ಯಾವುದೇ ಶೀರ್ಷಿಕೆಯಿಲ್ಲ

Top Post Ad

Click to join Samarasasudhi Official Whatsapp Group

Qries

                     ಕ್ಯಾಂಪ್ಕೋ ನೌಕರರ ಸಮಾವೇಶ
    ಬದಿಯಡ್ಕ: ಸಹಕಾರ ಭಾರತಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕ್ಯಾಂಪ್ಕೋ ನೌಕರರ ಸಮಾವೇಶವು ಬದಿಯಡ್ಕ ಕ್ಯಾಂಪ್ಕೋ ಕಚೇರಿಯಲ್ಲಿ ಇತ್ತೀಚೆಗೆ ಜರಗಿತು.
ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ಯಾಂಪ್ಕೋ ಮತ್ತು ಸಮಾಜ ಎಂಬ ವಿಷಯದ ಕುರಿತು ಅವರು ಮಾರ್ಗದರ್ಶನ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಕ್ಷೇತ್ರೀಯ ಸೇವಾ ಪ್ರಮುಖ್ ಗೋಪಾಲ ಚೆಟ್ಟಿಯಾರ್ ಸಂಘ ಮತ್ತು ಸೇವಾ ಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡಿದರು.
   ಸಮಾರೋಪ ಅವಧಿಯಲ್ಲಿ ಸಹಕಾರ ಭಾರತಿ ಅಖಿಲ ಭಾರತ ಕಾರ್ಯದಶರ್ಿ ಹಾಗೂ ನೇಶನಲ್ ಕೌನ್ಸಿಲ್ ಫೋರ್ ಕೋ-ಆಪರೇಟಿವ್ ಟ್ರೈನಿಂಗ್ ಸಂಸ್ಥೆಯ ನಿದರ್ೇಶಕರಾದ ನ್ಯಾಯವಾದಿ ಕರುಣಾಕರನ್ ನಂಬ್ಯಾರ್ ಸಹಕಾರ ಭಾರತೀಯ ಸಂಘಟನಾತ್ಮಕ ಕಾರ್ಯಗಳು ಹಾಗೂ ನೌಕರರ ಪಾಲ್ಗೊಳ್ಳುವಿಕೆಯ ಕುರಿತು ವಿಷಯ ಮಂಡಿಸಿದರು. ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷ ಗಣಪತಿ ಕೋಟೆಕಣಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದರು. ಸಹಕಾರ ಭಾರತಿ ರಾಜ್ಯ ಸಮಿತಿ ಸದಸ್ಯರಾದ ಐತ್ತಪ್ಪ ಮವ್ವಾರು, ಕ್ಯಾಂಪ್ಕೋ ನಿದರ್ೇಶಕರಾದ ಕೋಳಾರು ಸತೀಶ್ಚಂದ್ರ ಭಂಡಾರಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
   ಈ ಸಂದರ್ಭದಲ್ಲಿ ಕ್ಯಾಂಪ್ಕೋ ಇನ್ ಸೇವಾ ಎಂಬ ಹೆಸರಿನಲ್ಲಿ ನೂತನ ವಾಟ್ಸಪ್ ಗ್ರೂಪ್ಗೆ ಚಾಲನೆ ನೀಡಲಾಯಿತು. ಕ್ಯಾಂಪ್ಕೋ ನಿದರ್ೇಶಕರುಗಳಾದ ಶಿವಕೃಷ್ಣ ಭಟ್, ಶಂಕರನಾರಾಯಣ ಭಟ್ ಕಿದೂರು, ಬಾಲಕೃಷ್ಣ ರೈ ಬಾನೋಟ್, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಜಿಲ್ಲೆಯ ಹಾಗೂ ದಕ್ಷಿಣ ಕನ್ನಡದ ಕ್ಯಾಂಪ್ಕೋ ಕೇಂದ್ರಗಳಲ್ಲಿ ದುಡಿಯುತ್ತಿರುವ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಿದರು. ಸಹಕಾರ ಭಾರತಿ ರಾಷ್ಟ್ರೀಯ ಸಮಿತಿ ಸದಸ್ಯ ಗಣೇಶ್ ಪಾರೆಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಕ್ಯಾಂಪ್ಕೋ ನೌಕರರಾದ ವಾಣಿ ಸರಸ್ವತಿ ಪ್ರಾರ್ಥನೆ ಹಾಡಿದರು. ಮಂಜೇಶ್ವರ ತಾಲೂಕು ಕಾರ್ಯದಶರ್ಿ ದಿಲೀಪ್ ಕುಮಾರ್ ಸಹಕಾರ ಗೀತೆ ಹಾಡಿದರು. ಜಿಲ್ಲಾ ಕಾರ್ಯದಶರ್ಿ ಎಸ್.ನಾರಾಯಣ ಸ್ವಾಗತಿಸಿ, ಕಾಸರಗೋಡು ತಾಲೂಕು ಅಧ್ಯಕ್ಷ ಪದ್ಮರಾಜ್ ಪಟ್ಟಾಜೆ ವಂದಿಸಿದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ  ರೀತಿಯಲ್ಲೂ ಸಹಕರಿಸಿದ ಬದಿಯಡ್ಕ ಕ್ಯಾಂಪ್ಕೋ ಕಚೇರಿಯ ಪ್ರಬಂಧಕರು ಹಾಗೂ ನೌಕರ ವೃಂದವನ್ನು ಸಹಕಾರ ಭಾರತಿ ಜಿಲ್ಲಾ ಸಮಿತಿ ಅಭಿನಂದಿಸಿದೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries