HEALTH TIPS

No title

           ಉತ್ತಮ ಕೆಲಸ, ಶ್ರೇಷ್ಠ ಚಿಂತನೆಯ ಮೂಲಕ ಸಮಾಜಕ್ಕೆ ಒಳಿತಾಗಲು ಪ್ರಯತ್ನಿಸಬೇಕು : ಮಾಲತಿ ಸುರೇಶ್
   ಮಧೂರು: ಮಾನವ ಮತ್ತು ಸಮಾಜ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಉತ್ತಮ ಕೆಲಸ, ಶ್ರೇಷ್ಠ ಚಿಂತನೆಯ ಮೂಲಕ ಸಮಾಜಕ್ಕೆ ಒಳಿತಾಗುವ ಕೆಲಸ ಮಾಡಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂಬುದಾಗಿ ಮಧೂರು ಗ್ರಾಮ ಪಂಚಾಯತು ಅಧ್ಯಕ್ಷೆ ಮಾಲತಿ ಸುರೇಶ್ ಅವರು ಅಭಿಪ್ರಾಯಪಟ್ಟರು.
    ಕೊಲ್ಯದ ಶಿವಾಜಿ ಕಲಾ ಸಂಘದ 46 ನೇ ವಾಷರ್ಿಕೋತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಸಂಘಸಂಸ್ಥೆಗಳು ಸಾಂಸ್ಕೃತಿಕ, ಶೈಕ್ಷಣಿಕ, ಕ್ರೀಡಾ ಕ್ಷೇತ್ರಗಳಲ್ಲಿ ಮಾತ್ರವಲ್ಲದೇ ಸಾಮಾಜಿಕ ಕ್ಷೇತ್ರದಲ್ಲೂ  ಜನಹಿತ ಕಾರ್ಯಕ್ರಮಗಳನ್ನು ನಡೆಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಅವರು ಕರೆಯಿತ್ತರು.
   ಸಮಾರಂಭದಲ್ಲಿ ಮಧೂರು ಗ್ರಾಮ ಪಂಚಾಯತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡಿನ ಇನ್ಸ್ಪೆಕ್ಟರ್ ಆಫ್ ಪೊಲೀಸ್ ಬಾಬು ಪೆರಿಂಙೋತ್, ಬ್ಲಾಕ್ ಪಂಚಾಯತು ಸದಸ್ಯ ಪ್ರಭಾಶಂಕರ ಎ., ಮಧೂರಿನ ಹಿರಿಯ ಆರೋಗ್ಯ ಪರಿವೀಕ್ಷಕ ಅರುಣ್, ನಿವೃತ್ತ ಮುಖ್ಯೋಪಾಧ್ಯಾಯ ಮಹಮ್ಮದ್ ಕುಂಞಿ ಮಾಸ್ಟರ್, ಕೂಡ್ಲು ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲಾ ಹಿರಿಯ ಅಧ್ಯಾಪಕ ನರಸಿಂಹ ಮಯ್ಯ ಎಂ. ಮುಂತಾದವರು ಶುಭ ಹಾರೈಸಿ ಮಾತನಾಡಿದರು.
   ಕಾರ್ಯಕ್ರಮದಲ್ಲಿ ಖ್ಯಾತ ಸಮಾಜ ಸುಧಾರಕರೂ, ಮಧೂರು ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷ  ಬಿ.ಮಹಾಲಿಂಗಯ್ಯ ಹಾಗೂ ಪ್ರಸಿದ್ಧ ಕಲಾವಿದ ಸುಂದರಕೃಷ್ಣ ಮಧೂರು ಅವರನ್ನು ಶಾಲು ಹೊದಿಸಿ ಸ್ಮರಣಿಕೆಗಳನ್ನಿತ್ತು ಸಮ್ಮಾನಿಸಲಾಯಿತು. ಕೆ.ನಾರಾಯಣಯ್ಯ ಅವರು ಸಮ್ಮಾನಿತರನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ಪ್ರತಿಭಾವಂತ ಸಿನೆಮಾ ಬಾಲನಟಿ ಶ್ರೀವಿದ್ಯಾ ಮಧೂರು ಮತ್ತು ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಬಹುಮಾನಗಳಿಸಿದ ಭರತ್ರಾಜ್ ಕೊಲ್ಯ ಅವರನ್ನು ಅಭಿನಂದಿಸಲಾಯಿತು.
   ವಾಷರ್ಿಕೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ, ವಿದ್ಯಾಥರ್ಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪಧರ್ೆಗಳನ್ನು ಹಮ್ಮಿಕೊಂಡಿದ್ದು, ವಿಜೇತರಿಗೆ ಬಹುಮಾನಗಳನ್ನು ಅತಿಥಿಗಣ್ಯರು ವಿತರಿಸಿದರು.
   ಸಂಘದ ಕಳೆದ ಸಾಲಿನ ವರದಿಯನ್ನು ಪ್ರಧಾನ ಕಾರ್ಯದಶರ್ಿ ಚಂದ್ರಶೇಖರ ಏರಿಕ್ಕಳ ಮಂಡಿಸಿದರು. ಸಭಾ ಕಾರ್ಯಕ್ರಮದ ನಂತರ ಸಂಘದ ಸದಸ್ಯರಿಂದ ನೃತ್ಯ, ಭರತನಾಟ್ಯ, ನೃತ್ಯ ರೂಪಕ ಮುಂತಾದ ಮನೋರಂಜನಾ ಕಾರ್ಯಕ್ರಮ ಜರಗಿತು. ಸಂಘದ ಅಧ್ಯಕ್ಷ ಅವಿನಾಶ್ ಕೋಜರ್ಾಲ್ ಸ್ವಾಗತಿಸಿ, ಉಪಾಧ್ಯಕ್ಷ ಉಮೇಶ್ ನಾಕ್ ವಂದಿಸಿದರು.
   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries