ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ ರಂಜಿಸಿದ ಯಕ್ಷವೈಭವ
ಮುಳ್ಳೇರಿಯ: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ 11ನೇ ಕಾಸರಗೋಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭಾನುವಾರ ಮುಳ್ಳೇರಿಯದ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಪರಿಸರದಲ್ಲಿ ಗುರುಪ್ರಸಾದಿತ ಯಕ್ಷಗಾನ ಮಂಡಳಿ ಸಾಲಿಗ್ರಾಮ ತಂಡದವರಿಂದ ಯಕ್ಷ ವೈಭವ ಭಕ್ತ ಚಂದ್ರಹಾಸ ಪ್ರದರ್ಶನಗೊಂಡಿತು.
ಈ ಸಂದರ್ಭದಲ್ಲಿ ಪ್ರೇಕ್ಷಕರು ಕಿಕ್ಕಿರಿದು ನೆರೆದಿದ್ದರು. ಎರಡು ಗಂಟೆಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಪುರಾಣದ ಪ್ರಸಂಗದ ಭಾಗಗಳನ್ನು ಆಯ್ದು ಪ್ರೇಕ್ಷಕ ಮನಸ್ಸನ್ನು ಹಿಡಿದಿಡಲು ಯಶಸ್ವಿಯಾಗಿದೆ. ಗೋವಿಂದ ಬಳ್ಳಮೂಲೆ ಕಾರ್ಯಕ್ರಮ ನಿರೂಪಿಸಿದರು.