ರಜತ ಕಿರೀಟ ಸಮರ್ಪಣಾ-ಪೌರ ಸನ್ಮಾನ ಆಮಂತ್ರಣ ಬಿಡುಗಡೆ
ಬದಿಯಡ್ಕ : ಬಳ್ಳಪದವು ಡಾ. ಮಾಧವ ಉಪಾಧ್ಯಾಯ ಅಭಿನಂದನ ಸಮಿತಿ ಕಾಸರಗೋಡು, ಶ್ರೀ ದುಗರ್ಾಪರಮೇಶ್ವರೀ ದೇವಸ್ಥಾನ ಮಲ್ಲ ಇವರ ನೇತೃತ್ವದಲ್ಲಿ ತಿರುಪತಿ ಸಂಸ್ಕೃತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಬಳ್ಳಪದವು ಡಾ. ಮಾಧವ ಉಪಾಧ್ಯಾಯರಿಗೆ ಮೇ.5ರಂದು ಬದಿಯಡ್ಕ ಶ್ರೀ ಗಣೇಶ ಮಂದಿರದಲ್ಲಿ ರಜತ ಕಿರೀಟ ಸಮಪರ್ಿಸಿ ನಡೆಯುವ ಪೌರ ಸನ್ಮಾನ ಕಾರ್ಯಕ್ರಮದ ಆಮಂತ್ರಣಪತ್ರಿಕೆಯನ್ನು ಎಡನೀರು ಮಠದ ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರು ಭಾನುವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಲ್ಲ ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣು ಭಟ್, ಅಗಲ್ಪಾಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಉಪ್ಪಂಗಳ ವಾಸುದೇವ ಭಟ್, ಸಂಚಾಲನಾ ಸಮಿತಿಯ ಸದಸ್ಯರು ಹಾಜರಿದ್ದರು. ನಂತರ ನಡೆದ ಸಮಾಲೋಚನಾ ಸಭೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅತೀ ಅಗತ್ಯ ಎಂದು ಸಮಿತಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್ ಕರೆನೀಡಿದರು.
ಏಪ್ರಿಲ್ 26ರಂದು 4 ಗಂಟೆಗೆ ಬದಿಯಡ್ಕ ಗಣೇಶಮಂದಿರದಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ಊರಪರವೂರ ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಬಂಧಪಟ್ಟವರು ತಿಳಿಸಿರುತ್ತಾರೆ.