HEALTH TIPS

No title

                           ಕನ್ನಡ ಸಂಸ್ಕೃತಿ ಶಿಬಿರ ಸಮಾರೋಪ ಸಮಾರಂಭ
     ಬದಿಯಡ್ಕ: ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ ಸಂಸ್ಥೆಯ ನೇತೃತ್ವದಲ್ಲಿ ಕನರ್ಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಎಡನೀರಿನಲ್ಲಿ ಐದು ದಿನಗಳ ಕಾಲ ನಡೆದ ಕನ್ನಡ ಸಂಸ್ಕೃತಿ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ಜರಗಿತು.
    ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಚೆಂಗಳ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ವೊಕರ್ೋಡ್ಲು ಮಾತನಾಡಿ, ಇಂತಹ ಶಿಬಿರಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅವಶ್ಯ. ಮಕ್ಕಳ ಸೃಜನಾತ್ಮಕತೆಗೆ ಪ್ರೋತ್ಸಾಹ ನೀಡಿದಾಗ ಮುಂದೆ ಧೀಮಂತರಾಗಿ ಬೆಳೆದು ನಿಲ್ಲಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.
    ಮುಖ್ಯ ಅತಿಥಿಗಳಾದ ಶಾರದಾ ಏನಂಕೋಡ್ಳು ಮಾತನಾಡಿ, ಇಂತಹ ಶಿಬಿರಗಳಿಂದ ಮಕ್ಕಳು ಮತ್ತು ಮಕ್ಕಳೊಂದಿಗೆ ಹೊಂದಿಕೊಂಡು ಹೋಗುವ ಗುಣವನ್ನು ಕಲಿಯುತ್ತಾರೆ. ಮೊಬೈಲ್, ಟಿ.ವಿ. ಯನ್ನೇ ನೆಚ್ಚಿಕೊಂಡಿರುವ ಮಕ್ಕಳು ಅದರಿಂದ ಹೊರ ಬರಲು ಈ ಶಿಬಿರ ಸಹಕಾರಿ ಎಂದರು. ವ್ಯಂಗ್ಯಚಿತ್ರಕಾರ, ಕವಿ ವೆಂಕಟ ಭಟ್ ಎಡನೀರು ಉಪಸ್ಥಿತರಿದ್ದು ಶುಭಹಾರೈಸಿದರು.
  ಉಪಸ್ಥಿತರಿದ್ದ ಕಾಸರಗೋಡು ಸರಕಾರಿ ಕಾಲೇಜಿನ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಡಾ. ರತ್ನಾಕರ ಮಲ್ಲಮೂಲೆ ಮಾತನಾಡಿ, ಗಡಿನಾಡಾದ ಕಾಸರಗೋಡಿನಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಭೂಮಿಕಾ ಪ್ರತಿಷ್ಠಾನ ಸಂಸ್ಥೆಯು ಗಣನೀಯ ಸೇವೆ ಸಲ್ಲಿಸುತ್ತಿದೆ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ಕಲೆ, ಸಾಹಿತ್ಯದ ಆಸಕ್ತಿಯನ್ನು ಮೂಡಿಸುವ ಕೈಂಕರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹವನ್ನೂ ಸಭ್ಯ ಸಮಾಜ ಒದಗಿಸಬೇಕು  ಎಂದು ತಿಳಿಸಿದರು.
   ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನೆನಪಿನ ಕಾಣಿಕೆ ಹಾಗೂ ಪ್ರಮಾಣ ಪತ್ರ ನೀಡಲಾಯಿತು. ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷೆ ವಿದುಷಿ ಅನುಪಮಾ ರಾಘವೇಂದ್ರ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ವೇದಮೂತರ್ಿ ರಾಘವೇಂದ್ರ ಭಟ್ ವಂದಿಸಿದರು. ಇದೇ ಶಿಬಿರದಲ್ಲಿ ಮಕ್ಕಳು ಕಲಿತಿರುವ ಗಣಪತಿ ಸ್ತುತಿಯೊಂದಿಗೆ ಆರಂಭಗೊಂಡ ಕಾರ್ಯಕ್ರಮ ಶಿಬಿರಗೀತೆಯೊಂದಿಗೆ ಮುಕ್ತಾಯಗೊಂಡಿತು.
   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries