ಈ ವರ್ಷ ಸಾಮಾನ್ಯ ಮುಂಗಾರು: ಹವಾಮಾನ ಇಲಾಖೆ
ನವದೆಹಲಿ: ಈ ವರ್ಷ ದೇಶಾದ್ಯಂತ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುನ್ಸೂಚನೆ ನೀಡಿದೆ.
ಸೋಮವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ಹವಾಮಾನ ಇಲಾಖೆ ನಿದರ್ೇಶಕ ಕೆಜಿ ರಮೇಶ್ ಅವರು, ಈ ಬಾರಿ
ದೀಘರ್ಾವಧಿಯಲ್ಲಿ ಶೇ. 97ರಷ್ಟು ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಜೂನ್ ನಿಂದ ಸೆಪ್ಟೆಂಬರ್ವರೆಗೆ ಸಾಧಾರಣ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದರು.
ನಾಲ್ಕು ತಿಂಗಳ ಅವಧಿಯಲ್ಲಿ ಕೆಲವೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಮೇಶ್ ಮಾಹಿತಿ ನೀಡಿದ್ದಾರೆ. ಮೇ ತಿಂಗಳ ಮಧ್ಯದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ ಕೂಡ ಸಾಧಾರಣ ಮುಂಗಾರು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿತ್ತು. ಅದರಂತೆ ಶೇಕಡ 95ರಷ್ಟು ಮಳೆಯಾಗಿತ್ತು.