ಭಾರತ, ಚೀನಾ ಗಡಿ ವಿವಾದ: ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮಾತುಕತೆ
ಬೀಜಿಂಗ್: ಭಾರತ ಮತ್ತು ಚೀನಾ ಗಡಿ ವಿವಾದದ ಕುರಿತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮತ್ತು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಪಾಲಿಟ್ ಬ್ಯೂರೊ ಸದಸ್ಯ ಯಾಂಗ್ ಜೀಚಿ ಶುಕ್ರವಾರ ಚಚರ್ೆ ನಡೆಸಿದ್ದಾರೆ.
ದೋಕಲಾ ಬಿಕ್ಕಟ್ಟಿನ ನಂತರ ಭಾರತ-ಚೀನಾ ನಡುವೆ ನಡೆದ ಎರಡನೇ ಮಾತುಕತೆ ಇದಾಗಿದೆ. ಗಡಿವಿವಾದ ಪರಿಹರಿಸಿಕೊಳ್ಳಲು ಎರಡೂ ರಾಷ್ಟ್ರಗಳು ಪ್ರಯತ್ನಿಸುತ್ತಿವೆ. ಭಾರತ-ಚೀನಾ ಗಡಿ ವಿವಾದ ಕುರಿತ ಮಾತುಕತೆಯ ವಿಶೇಷ ಪ್ರತಿನಿಧಿಗಳಾದ ಡೊಭಾಲ್ ಮತ್ತು ಯಾಂಗ್ ಮಾತುಕತೆ ನಡೆಸಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ಪ್ರಕಟಣೆ ತಿಳಿಸಿದೆ. ಆದರೆ ಮಾತುಕತೆಯ ವಿವರಗಳನ್ನು ಅದು ಬಹಿರಂಗಪಡಿಸಿಲ್ಲ. ಯಾಂಗ್, ಚೀನಾದ ವಿದೇಶಾಂಗ ವ್ಯವಹಾರಗಳ ಆಯೋಗದ ನಿದರ್ೇಶಕರೂ ಆಗಿದ್ದಾರೆ.