ಸುಳ್ಳು ಸುದ್ದಿಗೆ ಕಡಿವಾಣ: ಯೂ ಟನರ್್ ಹೊಡೆದ ಕೇಂದ್ರ, ಪತ್ರಕರ್ತರ ಮಾನ್ಯತೆ ರದ್ದು ಆದೇಶ ವಾಪಸ್
ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಪ್ರಧಾನಿ ಕಾಯರ್ಾಲಯ ತಡೆ ಹಿಡಿದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ನೇತೃತ್ವದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ಹೊರಡಿಸಿದ್ದ ಪ್ರಕಟಣೆಯನ್ನು ಪ್ರಧಾನಿ ನರೇಂದ್ರ ಮೋದಿ ಕಾಯರ್ಾಲಯ ಹಿಂದಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಅಲ್ಲದೆ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತನ ವಿರುದ್ಧ ಕ್ರಮ ಕೈಗೊಳ್ಳುವ ಆಯ್ಕೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ಮಾತ್ರ ಇದೆ ಎಂದು ಸ್ಪಷ್ಟನೆ ನೀಡಿದೆ.
ಇನ್ನು ಮಂಗಳವಾರ ಬೆಳಗ್ಗೆಯಷ್ಟೇ ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಸುಳ್ಳು ಸುದ್ದಿ ಪ್ರಕಟಿಸಿದ ಅಥವಾ ಪ್ರಸಾರ ಮಾಡಿದ ಆರೋಪ ಸಾಬೀತಾದರೆ, ಮೊದಲ ತಪ್ಪಿಗೆ ಆರು ತಿಂಗಳ ಮಟ್ಟಿಗೆ ಮತ್ತು ಎರಡನೇ ಬಾರಿಯ ತಪ್ಪಿಗೆ ಒಂದು ವರ್ಷದ ಮಟ್ಟಿಗೆ ಪತ್ರಕರ್ತರ ಮಾನ್ಯತೆ ರದ್ದು ಮಾಡಲಾಗುವುದು. ಮೂರನೇ ಬಾರಿಗೆ ತಪ್ಪು ಮಾಡಿದಲ್ಲಿ ಶಾಶ್ವತವಾಗಿ ಮಾನ್ಯತೆ ರದ್ದು ಮಾಡಲಾಗುವುದು ಎಂದು ಹೇಳಿತ್ತು.
ಜೊತೆಗೆ ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿ ಸುಳ್ಳು ಸುದ್ದಿಗಳ ಕುರಿತು ನಿರ್ಣಯ ಕೈಗೊಳ್ಳುವ ಹೊಣೆಯನ್ನು ಭಾರತೀಯ ಪತ್ರಿಕಾ ಮಂಡಳಿಗೆ (ಪಿಸಿಐ) ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳ ಕುರಿತು ನಿರ್ಣಯ ಕೈಗೊಳ್ಳುವ ಹೊಣೆಯನ್ನು ಸುದ್ದಿ ಪ್ರಸಾರಕರ ಸಂಘಟನೆ (ನ್ಯೂಸ್ ಬ್ರಾಡ್ಕಾಸ್ಟಸರ್್ ಅಸೋಸಿಯೇಷನ್/ಎನ್ಬಿಎ)ಗೆ ವಹಿಸಲಾಗುವುದು. ಈ ಸಂಸ್ಥೆಗಳು 15 ದಿನಗಳ ಒಳಗೆ ನಿರ್ಣಯ ಕೈಗೊಳ್ಳಬೇಕೆಂದು ನಿರೀಕ್ಷಿಸಲಾಗಿದೆ ಎಂದು ಇಲಾಖೆ ತಿಳಿಸಿತ್ತು. ಈ ಮಧ್ಯೆ ಇಲಾಖೆ ಆದೇಶ ಪ್ರಕಟವಾಗುತ್ತಿದ್ದಂತೆಯೇ ಹಲವು ಪತ್ರಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಲ್ಲದೇ ನೇರ ಪ್ರಧಾನಿ ಕಾಯರ್ಾಲಯಕ್ಕೆ ಈ ಸಂಬಂಧ ಟ್ವೀಟ್ ಮಾಡಿದ್ದರು. ಇದರ ಈ ಕಾರಣದಿಂದ ಮೋದಿ ಸಕರ್ಾರ ತನ್ನ ಆದೇಶವನ್ನು ವಾಪಸ್ ಪಡೆದಿದೆ.