ಅಖಂಡ ಏಕಾಹ ಭಜನೆ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ವೇದಮೂರ್ತಿ ಶ್ರೀ ಶುಳುವಾಲಮೂಲೆ ಶಿವಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಮೇ 11 ಶುಕ್ರವಾರದಂದು ಅಖಂಡ ಏಕಾಹ ಭಜನೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಪ್ರಾತಃಕಾಲ ಆರು ಗಂಟೆಗೆ ದೀಪ ಪ್ರತಿಷ್ಠೆ , ಸಾಮೂಹಿಕ ಪ್ರಾರ್ಥನೆಯೊಂದಿಗೆ ಆರಂಭವಾಗಲಿದ್ದು ಬಳಿಕ ವಿವಿಧ ಭಜನಾ ತಂಡಗಳಿಂದ ಭಜನೆ ಸಾಯಂಕಾಲ ಗಂಟೆ 5.30 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದ್ದು ರಾತ್ರಿ ಗಂಟೆ 8 ಕ್ಕೆ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ