HEALTH TIPS

No title

  ಕನರ್ಾಟಕದ 25ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ
    ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸಕರ್ಾರ ಚುಕ್ಕಾಣಿ ಹಿಡಿದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
  ಹೆಚ್.ಡಿ.ಕುಮಾರಸ್ವಾಮಿಯವರೊಂದಿಗೆ ಕಾಂಗ್ರೆಸ್ ಪಾಳಯದಿಂದ ಆ ಪಕ್ಷದ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಕೂಡ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.
  ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಅದ್ಧೂರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಅವರಿಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
  ಪ್ರಮಾಣವಚನ ಸ್ವೀಕಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನಜರ್ಿ, ಮಾಯಾವತಿ, ಸಿಪಿಐಎಂ ಪ್ರಧಾನ ಕಾರ್ಯದಶರ್ಿ ಸೀತಾರಾಮ್ ಯೆಚೂರಿ, ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಇನ್ನಿತರೆ ಗಣ್ಯಾತಿ ಗಣ್ಯರು ಸಾಕ್ಷಿಯಾದರು.
  2006ರಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಗೆ ನೀಡಿದ್ದ ಬೆಂಬಲವನ್ನು ಹಿಂದಕ್ಕೆ ಪಡೆದು ಬಿಜೆಪಿ ಜೊತೆಗೆ ಕೈಜೋಡಿಸಿ ಹೊಸ ಸಕರ್ಾರ ರಚಿಸುವ ಮೂಲಕ ಕುಮಾರಸ್ವಾಮಿಯವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದರು. ಆಗ ಅವರು ಮೊದಲ ಬಾರಿ ಶಾಸಕರಾಗಿದ್ದರು. ಹೀಗೆ ಚೊಚ್ಚಲ ಬಾರಿಗೆ ಶಾಸಕರಾಗಿ ಮುಖ್ಯಮಂತ್ರಿಯಾದ ಹೆಗ್ಗಳಿಕೆ ಅವರ ಪಾಲಾಗಿತ್ತು.
  ಈಗಲೂ ಒಂದು ರೀತಿಯ ಕ್ಷಿಪ್ರ ರಾಜಕೀಯ ಬೆಳವಣಿಗೆ ರೀತಿಯಲ್ಲಿಯೇ ಕಾಂಗ್ರೆಸ್ ಜೊತೆಗೆ ಕೈಜೋಡಿಸಿರುವ ಕುಮಾರಸ್ವಾಮಿಯವರು ಸಕರ್ಾರ ರಚನೆ ಮಾಡಿದ್ದಾರೆ.
ಸಹಸ್ರಾರು ಸಂಖ್ಯೆ ಜನರು ಹಾಗೂ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
 ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಕುಮಾರಸ್ವಾಮಿಯವರು ಮೇ.25ರಂದು ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಅದೇ ದಿನ ವಿಧಾನಸಭೆಯ ನೂತನ ಸ್ಪೀಕರ್ ಮತ್ತು ಡೆಪ್ಯೂಟಿ ಸ್ಪೀಕರ್ ಆಯ್ಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಮೊದಲು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ವಿಶ್ವಾಸಮತ ಯಾಚನೆ ಮಾಡಲು ಉದ್ದೇಶಿಸಲಾಗಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries