HEALTH TIPS

No title

                ವಿದಾಯ ಭಾಷಣ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಯಡಿಯೂರಪ್ಪ
     ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸಮತಯಾಚಿಸದೇ ಸದನದಲ್ಲಿ ವಿದಾಯ ಭಾಷಣ ಮಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
   ಸದನದಲ್ಲಿ ಸುದೀರ್ಘ ಭಾಷಣ ಮಾಡಿದ ಯಡಿಯೂರಪ್ಪ, ನಾನು ಜೀವನದ ಕಡೆಯ ಕ್ಷಣದ ವರೆಗೂ ರೈತರ ಪರವಾಗಿ ಕೆಲಸ ಮಾಡುತ್ತೇನೆ. ರೈತರಿಗೆ ನೀರು ಕೊಡಲು ನಮಗೆ ಸಾಧ್ಯವಾಗಿಲ್ಲ. ಸಂಕಷ್ಟದಲ್ಲಿ ಒದ್ದಾಡುತ್ತಿರುವ ಜನರಿಗೆ ನೆಮ್ಮದಿ ನೀಡಲು ಆಗಿಲ್ಲ ಎಂದರು.
   ಸ್ವಾತಂತ್ರ್ಯ ಬಂದು ಸುಧೀರ್ಘ ಅವಧಿಯಲ್ಲೂ ಹಸಿವು ಮುಕ್ತ ಮಾಡಲಾಗಿಲ್ಲ. ರೈತರಿಗೆ ಕುಡಿಯುವ ನೀರು, ಬೆಳೆಗೆ ನೀರು, ಕೆರೆಕಟ್ಟೆ ತುಂಬಿಸಲು ಆಗಿಲ್ಲ. ಈ ನಾಡಿನ ಅನ್ನದಾತ ರೈತ ಸಮಸ್ಯೆಯಲ್ಲಿದ್ದಾನೆ. ರೈತರಿಗೆ ಬೆಂಬಲ ಬೆಲೆ ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರಿಗಾಗಿ ನಾನು ಸರ್ವಸ್ವವನ್ನು ತ್ಯಾಗ ಮಾಡಲು ಸಿದ್ದ ಎಂದರು.
   ಇದೇ ವೇಳೆ ಐದು ವರ್ಷಗಳ ಕಾಲ ಬಿಜೆಪಿ ನಡೆದು ಬಂದ ಹಾದಿಯನ್ನು ನೆನೆದ ಬಿಎಸ್ವೈ, ಜನಾದೇಶ ಕಾಂಗ್ರೆಸ್?- ಜೆಡಿಎಸ್ಗಿಲ್ಲ, ಬಿಜೆಪಿಗಿದೆ. ರಾಜ್ಯದ ಜನರು ಕಾಂಗ್ರೆಸ್?, ಜೆಡಿಎಸ್?ನ್ನು ತಿರಸ್ಕರಿಸಿರುವುದು ಇಡೀ ರಾಜ್ಯದ ಜನರಿಗೆ ತಿಳಿದಿದೆ ಎಂದು ವಾಗ್ದಾಳಿ ನಡೆಸಿದರು.
    ಅಪ್ಪನ ಆಣೆ ಮಾಡಿಕೊಂಡ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಕೈ ಜೋಡಿಸಿರುವುದಕ್ಕೆ ನನ್ನ ವಿರೋಧ ಇದೆ. ಕೇವಲ 40 ಸೀಟುಗಳನ್ನು ಹೊಂದಿದ್ದ ನಮ್ಮನ್ನು ಜನ ಏಕೈಕ ದೊಡ್ಡ ಪಕ್ಷವಾಗಿ ಆರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಗಿಂತ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಗೆದ್ದಿದೆ. ಪ್ರತಿ ತಾಲೂಕು, ವಿಧಾನಸಭಾ ಕ್ಷೇತ್ರದಲ್ಲೂ ಪರಿವರ್ತನಾ ಯಾತ್ರೆ ಮಾಡಿದ್ದೆವು. ಎರಡು ವರ್ಷ ನಿರಂತರವಾಗಿ ಜನರ ಸಮಸ್ಯೆ ಅರಿತೆ. ಪರಿವರ್ತನಾ ಯಾತ್ರೆಯಲ್ಲಿ ಸಿಕ್ಕ ಜನಬೆಂಬಲ್ಲಕ್ಕೆ ನಾನು ಋಣಿ ಎಂದರು.
    ವಿದಾಯ ಭಾಷಣದ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದೆ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.
              ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕಾರ:
    ಬಿ.ಎಸ್.ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿ ಸಕರ್ಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
   ಸಕರ್ಾರ ರಚನೆಗೆ ರಾಜ್ಯಪಾಲರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
  ಈ ಮೊದಲು ಸೋಮವಾರ ನಿಗಧಿಯಾಗಿದ್ದ ಕಾರ್ಯಕ್ರಮವು ರಾಜೀವ್ ಗಾಂಧಿ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಬುಧವಾರಕ್ಕೆ ಮುಂದೂಡಲಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
  104 ಸ್ಥಾನಗಳನ್ನು ಗಳಿಸಿ ಸಕರ್ಾರ ರಚಿಸಿದ್ದ ಬಿಎಸ್ವೈ ಬಹುಮತ ಸಾಬೀತು ಪಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ 117 ಶಾಸಕರ ಬಲವನ್ನು ಹೊಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಸಕರ್ಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries