ಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ
ಮಂಜೇಶ್ವರ: ಮೀಂಜ ಗ್ರಾಮ ಪಂಚಾಯತಿನ ಪ್ರಾಥಮಿಕ ಆರೋಗ್ಯ ಕೇಂದ್ರದ ನೇತೃತ್ವದಲ್ಲಿ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಂಕ್ರಾಮಿಕ ರೋಗಗಳ ಕುರಿತು ತಿಳುವಳಿಕಾ ತರಗತಿಯು ಇತ್ತೀಚೆಗೆ ನಡೆಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ.ಪ್ರಭಾಕರ ರೈ ಮಳೆಗಾಲದ ಸಾಂಕ್ರಾಮಿಕ ರೋಗಗಳಿಗೆ ಕಾರಣಗಳು, ಸೊಳ್ಳೆಗಳು ಹುಟ್ಟಿಕೊಳ್ಳಲು ಸಾಧ್ಯತೆ ಇರುವ ಮೂಲಗಳು ಮತ್ತು ಅವುಗಳ ನಾಶ ಮಾಡುವ ರೀತಿ ಇತ್ಯಾದಿಗಳ ಕುರಿತು ಸ್ಪಷ್ಟ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್, ಶಾಲಾ ಸಂಚಾಲಕರಾದ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಪರಿವೀಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಧ್ಯಾಪಕರಾದ ಕಿರಣ್ ಸ್ವಾಗತಿಸಿ, ವಂದಿಸಿದರು.