ಕೊಂಡೆವೂರಿನಲ್ಲಿ ಸಹಸ್ರ ವೃಕ್ಷ ಸಮೃದ್ಧಿ ಅಭಿಯಾನ= ಉದ್ಘಾಟನೆ.
ಉಪ್ಪಳ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ 2019 ರಲ್ಲಿ ನಡೆಯಲಿರುವ ವಿಶ್ವಜಿತ್ ಅತಿರಾತ್ರ ಸೋಮಯಾಗದ ಪೂರ್ವಭಾವಿಯಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಸಹಸ್ರ ನೆಲ್ಲಿ ಗಿಡ ನೆಡುವುದರ ಸಹಿತ ಸಹಸ್ರ ವೃಕ್ಷ ಸಮೃದ್ಧಿ ಅಭಿಯಾನದ ಉದ್ಘಾಟನಾ ಸಮಾರಂಭ ಜೂ. 11 ರಂದು ಸೋಮವಾರ ಪೂವರ್ಾಹ್ನ 11.30ಕ್ಕೆ ಗಾಯತ್ರೀ ಮಂಟಪದಲ್ಲಿ ಜರಗಲಿರುವುದು.
ಮಾಣಿಲದ ಪರಮಪೂಜ್ಯ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಕೊಂಡೆವೂರಿನ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿರುವರು. ಅಭಿಯಾನದ ಉದ್ಘಾಟನೆಯನ್ನು ಕೇಂದ್ರಸರಕಾರದ ಆಯುಷ್ ಖಾತೆ ಸಚಿವರಾದ ಶ್ರೀಪಾದ ಯಸ್ಸೋ ನಾಯಕ್ರವರು ನಡೆಸಲಿದ್ದು, ಕಾಸರಗೋಡು ಜಿಲ್ಲಾಧಿಕಾರಿ ಜೀವನ್ ಬಾಬು, ಮಂಗಳೂರಿನ ಶಾರದಾ ಸಮೂಹಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್, ಕಾಸರಗೋಡು ಜಿಲ್ಲಾ ಪಂಚಾಯತು ಸದಸ್ಯ ಶ್ರೀಕಾಂತ್ ಕೆ., ಮಂಗಳೂರು ಮಹಾನಗರಪಾಲಿಕೆ ಸದಸ್ಯ ಸುಧೀರ್ ಶೆಟ್ಟಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಚೇತನಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಸಾವಯವ ಭತ್ತದ ತಳಿಗಳನ್ನು ಸಂರಕ್ಷಿಸಿ ಬೆಳೆಸುತ್ತಿರುವ ಬೆಳ್ತಂಗಡಿಯ ಬಿ.ಕೆ. ದೇವರಾವ್ ಇವರನ್ನು ಸನ್ಮಾನಿಸಲಿದ್ದು, ಅಧ್ಯಕ್ಷತೆಯನ್ನು ಕನರ್ಾಟಕ ವಿಧಾನಪರಿಷತ್ತಿನ ಮಾಜಿ ಸದಸ್ಯ ಕೆ.ಮೋನಪ್ಪ ಭಂಡಾರಿ ವಹಿಸುವರು. ಪರಿಸರ ಸಂರಕ್ಷಣೆಯ ಧ್ಯೇಯದೊಂದಿಗೆ ನಡೆಸಲ್ಪಡುವ ಈ ಕಾರ್ಯಕ್ರಮದಲ್ಲಿ ಪ್ರಕೃತಿಪ್ರಿಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಆಶ್ರಮದ ಪ್ರಕಟಣೆಯಲ್ಲಿ ತಿಳಿಸಿರುವರು.