HEALTH TIPS

No title

                ಎಸ್ ಸಿಒ ಶೃಂಗಸಭೆ: ಬ್ರಹ್ಮಪುತ್ರ ದತ್ತಾಂಶ ಹಂಚಿಕೆ ಸೇರಿ ಎರಡು ಒಪ್ಪಂದಗಳಿಗೆ ಭಾರತ - ಚೀನಾ ಸಹಿ
    ಕಿಂಗ್ಡಾವೋ: ಬ್ರಹ್ಮಪುತ್ರ ನದಿಯಲ್ಲಿ ಹರಿಯುವ ನೀರಿನ ಪ್ರಮಾಣದ ಬಗ್ಗೆ ದತ್ತಾಂಶ ಹಂಚಿಕೊಳ್ಳುವ ಒಪ್ಪಂದ ಸೇರಿದಂತೆ ಎರಡು ಪ್ರಮುಖ ಒಪ್ಪಂದಗಳಿಗೆ ಭಾರತ ಮತ್ತು ಚೀನಾ ಶನಿವಾರ ಸಹಿ ಹಾಕಿವೆ.
    ಎರಡು ದಿನಗಳ ಶಾಂಘೈ ಸಹಕಾರ ಸಂಘಟನೆಯ 18ನೇ ಶೃಂಗಸಭೆ(ಎಸ್ ಸಿಒ)ಯಲ್ಲಿ ಪಾಲ್ಗೊಳ್ಳಲುಚೀನಾದ ಕ್ವಿಂಗ್ಡಾವೋಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಮಾತುಕತೆ ಬಳಿಕ ಬ್ರಹ್ಮಪುತ್ರ ನದಿ ನೀರಿನ ದತ್ತಾಂಶ ಹಂಚಿಕೆ ಹಾಗೂ ಭಾರತದಿಂದ ಬಾಸುಮತಿಯೇತರ ಅಕ್ಕಿ ಆಮದು ಒಪ್ಪಂದಕ್ಕೆ ಉಭಯ ನಾಯಕರು ಸಹಿ ಹಾಕಿದರು.
ಹೊಸ ಒಪ್ಪಂದದ ಪ್ರಕಾರ, ಚೀನಾ ಬ್ರಹ್ಮಪುತ್ರ ನದಿಯಲ್ಲಿ ಮೇ 15ರಿಂದ ಅಕ್ಟೋಬರ್ 15ರ ಅವಧಿಯಲ್ಲಿ ಹರಿಯುವ ನೀರಿನ ಪ್ರಮಾಣದ ಬಗ್ಗೆ ಭಾರತಕ್ಕೆ ಮಾಹಿತಿ ನೀಡಲಿದೆ. ಇದರಿಂದ ಅಸ್ಸಾಂನಲ್ಲಿ ತಲೆದೋರುವ ಪ್ರವಾಹವನ್ನು ಎದುರಿಸಲು ಭಾರತವು ಅಗತ್ಯ ಕ್ರಮ ತೆಗೆದುಕೊಳ್ಳಲು ನೆರವಾಗಲಿದೆ.
   ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ಭಾಗವಾಗಿ ನಡೆದ ಚಚರ್ೆಯಲ್ಲಿ  ಭಯೋತ್ಪಾದನೆ, ಉಗ್ರಗಾಮಿತ್ವ ಹಾಗೂ ತೀವ್ರಗಾಮಿತ್ವದ ವಿರುದ್ಧದ ಹೋರಾಟದಲ್ಲಿ ಪರಸ್ಪರ ಸಹಕಾರ ಸೇರಿದಂತೆ ಅನೇಕ ಜಾಗತಿಕ ಸಮಸ್ಯೆಗಳ ಬಗ್ಗೆ ಪ್ರಧಾನಿ ಮೋದಿ ಹಾಗೂ ಕ್ಸಿ ಜಿನ್ ಪಿಂಗ್ ಚಚರ್ೆ ನಡೆಸಿದ್ದಾರೆ.
   ವೂಹಾನ್ ಅನೌಪಚಾರಿಕ ಶೃಂಗಸಭೆಯಲ್ಲಿ ಅವರು ತೆಗೆದುಕೊಂಡ ನಿಧರ್ಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಮೋದಿ ಮತ್ತು ಕ್ಸಿ ಅವರು ಪ್ರಗತಿ ಸಾಧಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries