ಬದಿಯಡ್ಕದಲ್ಲಿ ಪರಿಸರ ದಿನಾಚರಣೆ
ಬದಿಯಡ್ಕ : ನಮ್ಮ ಪರಿಸರದ ಬಗ್ಗೆ ವಿಶೇಷ ಕಾಳಜಿಯನ್ನು ವಹಿಸಿ ಹಿರಿಯರಿಂದ ಬಂದಂತಹ ಈ ಭೂಮಿಯನ್ನು ಮುಂದಿನ ತಲೆಮಾರಿಗೆ ಉಳಿಸಿಕೊಡುವ ಮಹತ್ತರ ಜವಾಬ್ದಾರಿಯನ್ನು ನಾವು ನಿಭಾಯಿಸಬೇಕು. ಗಿಡಮರಗಳನ್ನು ಸಂರಕ್ಷಿಸುವ ಮೂಲಕ ನೆಲ ಜಲ ಹಾಗೂ ವಾಯು ಮಲಿನವಾಗದಂತೆ ನೋಡಿಕೊಳ್ಳಬೇಕು ಎಂದು ಬದಿಯಡ್ಕ ಗ್ರಾಮಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಹೇಳಿದರು.
ಅವರು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಗಳವಾರ ಬದಿಯಡ್ಕ ಗ್ರಾಮಪಂಚಾಯತ್ ಹಾಗೂ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವತಿಯಿಂದ ನೀಚರ್ಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಗಿಡನೆಟ್ಟು ಉದ್ಘಾಟಿಸಿ ಸಭಾಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಗ್ರಾಮಪಂಚಾಯತ್ ವತಿಯಿಂದ ಪ್ರತಿಯೊಂದು ಮನೆಯಲ್ಲಿ ಸಂಗ್ರಹಿಸಿಟ್ಟ ಪ್ಲಾಸ್ಟಿಕ್ಗಳನ್ನು ಸಂಗ್ರಹಿಸಿ ಸೂಕ್ತ ವಿಲೇವಾರಿ ಮಾಡಲಾಗುವುದು. ಪ್ಲಾಸ್ಟಿಕ್ಗಳನ್ನು ಉರಿಸುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ನಮ್ಮ ಮನೆಯಲ್ಲಿ ಪ್ಲಾಸ್ಟಿಕ್ ಉಪಯೋಗಿಸುವುದಿಲ್ಲ ಎಂದು ಮಕ್ಕಳು ಜಾಗೃತರಾದರೆ ಮುಂದೊಂದು ದಿನ ಪ್ಲಾಸ್ಟಿಕ್ ಮುಕ್ತ ಪರಿಸರ ನಮ್ಮದಾಗಲಿದೆ ಎಂದರು.
ಗ್ರಾಮಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಮಾನ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರೂ ಒಂದೊಂದು ಗಿಡವನ್ನು ನೆಟ್ಟು ಅದನ್ನು ಸಂರಕ್ಷಣೆ ಮಾಡುವಲ್ಲಿ ಮುತುವಜರ್ಿ ವಹಿಸಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್. ವೆಂಕಟ್ರಾಜ,ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ, ಗ್ರಾಮ ಪಂಚಾಯತ್ ಸದಸ್ಯ ಶಂಕರ ಡಿ., ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಮಾತನಾಡಿದರು. ಗ್ರಾಮಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಶೆಟ್ಟಿ ಕಡಾರು, ವಿಶ್ವನಾಥ ಪ್ರಭು ಕರಿಂಬಿಲ, ಸಿರಾಜ್ ಅಹಮ್ಮದ್, ಜಯಂತಿ, ಪ್ರೇಮ ಕುಮಾರಿ, ಯುಪಿ ಶಾಲಾ ಮುಖ್ಯೋಪಾಧ್ಯಾಯಿನಿ ಮೀನಾಕ್ಷಿ ಟೀಚರ್, ಕೃಷ್ಣ ಮಣಿಯಾಣಿ ಮೊಳೆಯಾರು, ಎಂ.ಎನ್.ಆರ್.ಜಿ.ಸದಸ್ಯರು ಪಾಲ್ಗೊಂಡಿದ್ದರು. ಗ್ರಾಮಪಂಚಾಯತ್ ಕಾರ್ಯದಶರ್ಿ ಮನೋಜ್ ಕುಮಾರ್ ಸ್ವಾಗತಿಸಿದರು.
ಏನಂತಾರೆ:
ಪ್ಲಾಸ್ಟಿಕ್ಗಳನ್ನು ಎಲ್ಲೆಂದರಲ್ಲಿ ಎಸೆಯುವುದು, ಉರಿಸುವುದು ಪರಿಸರ ನಾಶಕ್ಕೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಪ್ರತೀ ಮನೆಯಿಂದ ಪ್ಲಾಸ್ಟಿಕ್ಗಳನ್ನು ಸಂಗ್ರಹಿಸಿ ಸೂಕ್ತ ವಿಲೇವಾರಿ ಮಾಡಲಾಗುವುದು. ಸಾರ್ವಜನಿಕರು ಸಹಕರಿಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಬೇಕು.
- ಕೆ.ಎನ್.ಕೃಷ್ಣ ಭಟ್, ಗ್ರಾ.ಪಂ. ಅಧ್ಯಕ್ಷರು.