ಬಾಲಕಿ ಸೇರಿ ಮೂವರು ಸಾವು: ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ನಲ್ಲಿಅ ಕಲ್ಲು ತೂರಾಟಗಾರರ ಮೇಲೆ ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 16 ವರ್ಷದ ಬಾಲಕಿ ಸೇರಿದಂತೆ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿಮರ್ಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತನಾಗ್, ಕುಲ್ಗಮ್, ಪುಲ್ವಾಮ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಕೇಂದ್ರ ಕಾಶ್ಮೀರದ ಶ್ರೀನಗರ ಮತ್ತು ಬದ್ಗಮ್ ಜಿಲ್ಲೆಯಲ್ಲೂ ಇಂಟ್ ನೆಟ್ ಸೇವೆ ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ರೆಡ್ವಾಣಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಕ್ಯಾಂಪ್'ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸುವ ಸಲುವಾಗಿ ಸೇನೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು.