ಪ್ರಧಾನಿ ಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧದ ಹಕ್ಕುಚ್ಯುತಿ ನೋಟಿಸ್ ಪರಿಶೀಲನೆಯಲ್ಲಿದೆ: ಸ್ಪೀಕರ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕಾಂಗ್ರೆಸ್ ನೀಡಿದ ನೋಟಿಸ್ ಇನ್ನು ಪರಿಶೀಲನೆಯಲ್ಲಿದೆ ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಬುಧವಾರ ಹೇಳಿದ್ದಾರೆ.
ಜುಲೈ 20ರಂದು ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಪ್ರಧಾನಿ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ಅವರು ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕಾಂಗ್ರೆಸ್ ನಿನ್ನೆ ನೋಟಿಸ್ ನೀಡಿತ್ತು.
ಪ್ರಧಾನಿ ಹಾಗೂ ರಕ್ಷಣಾ ಸಚಿವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ತಲಾ ಐದು ಸದಸ್ಯರು ನೋಟಿಸ್ ನೀಡಿದ್ದು, ಅದು ನನ್ನ ಪರಿಶೀಲನೆಯಲ್ಲಿದೆ ಎಂದು ಮಹಾಜನ್ ಶೂನ್ಯ ವೇಳೆಯಲ್ಲಿ ತಿಳಿಸಿದ್ದಾರೆ.
ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾಜರ್ುನ ಖಗರ್ೆ ಹಾಗೂ ಪಕ್ಷದ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶೂನ್ಯ ವೇಳೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಅನ್ನು ಪ್ರಸ್ತಾಪಿಸಿದರು.