ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು: ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಬಾಲಕಿ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣ ಹಾಗೂ ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ ಹಾಗೂ ಪ್ರಕರಣದ ತ್ವರಿತ ವಿಚಾರಣೆ ನಡೆಸುವ ಅಂಶವಿರುವ ಕ್ರಿಮಿನಲ್ ಕಾಯ್ದೆಯ ತಿದ್ದುಪಡಿ ಮಸೂದೆ ಇಂದು ಲೋಕಸಭೆಯಲ್ಲಿ ಪಾಸ್ ಆಗಿದೆ.
ಅಪರಾಧ ಕಾನೂನು(ತಿದ್ದುಪಡಿ) ಮಸೂದೆ 2018 ಅನ್ನು ಬಹುತೇಕ ರಾಜಕೀಯ ಪಕ್ಷಗಳ ಸದಸ್ಯರು ಬೆಂಬಲಿಸಿದ್ದು, ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಅಪ್ರಾಪ್ತ ಬಾಲಕಿಯರಿಗೆ ರಕ್ಷಣೆ ಒದಗಿಸುವ ಉದ್ದೇಶದಿಂದ ಈ ತಿದ್ದುಪಡಿ ಮಸೂದೆ ಮಂಡಿಸಲಾಗಿದೆ ಎಂದು ಸುಮಾರು ಎರಡು ಗಂಟೆಗಳ ಚಚರ್ೆಯ ಬಳಿಕ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ತಿಳಿಸಿದ್ದಾರೆ.
ಸದ್ಯ ಇರುವ ಕಾನೂನಿನಲ್ಲಿ 16 ವರ್ಷ ಅಥವಾ 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರ ನಡೆದರೆ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಇಲ್ಲ ಎಂದು ರಿಜಿಜು ಹೇಳಿದ್ದಾರೆ.
ಈ ತಿದ್ದುಪಡಿ ಮಸೂದೆಯಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ತ್ವರಿತ ವಿಚಾರಣೆ ನಡೆಯಬೇಕೆಂಬ ಅಂಶವನ್ನು ಸೇರಿಸಲಾಗಿದೆ. ಅಲ್ಲದೆ
16 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು. ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾಧಿ ಶಿಕ್ಷೆ ವಿಧಿಸಬಹುದಾಗಿದೆ.