ನಿಧಿ ಸಂಗ್ರಹ ಕೂಪನ್ ಬಿಡುಗಡೆ
ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂಣರ್ೇಶ್ವರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ವತಿಯಿಂದ ಶಾಲಾ ಅಭಿವೃದ್ಧಿ ಕಾರ್ಯಗಳಿಗೆ ನಿಧಿ ಸಂಗ್ರಹ ಕೂಪನ್ ಬಿಡುಗಡೆ ಇತ್ತೀಚೆಗೆ ಜರಗಿತು.
ಕೂಪನ್ ಬಿಡುಗಡೆಯನ್ನು ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂಜೀವ ಶೆಟ್ಟಿ ನೆರವೇರಿಸಿದರು. ಅವರು ಮಾತನಾಡಿ ಶಾಲೆಯ ಅಭಿವೃದ್ಧಿಗೆ ಎಲ್ಲರೂ ಸಹಕರಿಸುವಂತೆ ಕರೆಕೊಟ್ಟರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ರೈ ಗೋಸಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕುಂಬ್ಡಾಜೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಆನಂದ ಕೆ.ಮವ್ವಾರು, ವ್ಯವಸ್ಥಾಪಕರಾದ ನಾರಾಯಣ ಶರ್ಮ ಬಳ್ಳಪದವು, ಗ್ರಾಮ ಪಂಚಾಯತಿ ಸದಸ್ಯೆ ಶಾಂತಾ ಎಸ್.ಭಟ್, ಶಾಲೆಯ ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಭಟ್ ತಲೇಕ, ನಿವೃತ್ತ ಅಧ್ಯಾಪಕ ರಾಮಚಂದ್ರ ಭಟ್ ಉಪ್ಪಂಗಳ ಯೋಜನೆಯು ಯಶಸ್ವಿಯಾಗುವಂತೆ ಶುಭ ಹಾರೈಸಿದರು.
ಪ್ರಾಂಶುಪಾಲ ಸತೀಶ್ ವೈ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಜಗದೀಶ್ ಭಟ್ ಕೆ.ಎಂ. ಮತ್ತು ಮುಖ್ಯೋಪಾಧ್ಯಾಯ ಗಿರೀಶ್ ಎನ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಧ್ಯಾಪಕರಾದ ಹರಿನಾರಾಯಣ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣೇಶ್ ಪಿ.ಎಸ್. ವಂದಿಸಿದರು.