ಇಚ್ಲಂಪಾಡಿ ಹಿರಿಯ ಬುನಾದಿ ಶಾಲಾ ಸಂಸ್ಥಾಪಕರ ದಿನಾಚರಣೆ
ಕುಂಬಳೆ: ಇಚ್ಲಂಪಾಡಿ ಹಿರಿಯ ಬುನಾದಿ ಶಾಲೆಯಲ್ಲಿ ಸಂಸ್ಥಾಪಕರ ದಿನವನ್ನು ಮಂಗಳವಾರ ಆಚರಿಸಲಾಯಿತು. ಶಾಲಾ ವ್ಯವಸ್ಥಾಪಕ ಗಣೇಶ್ ರಾವ್ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದರು. ರಕ್ಷಕ ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ ಕೆ.ಸಿ.ಮೋಹನ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕುಂಬಳೆ ಗ್ರಾಮ ಪಂಚಾಯತಿ ಸದಸ್ಯರಾದ ಸುಕೇಶ್ ಭಂಡಾರಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣ ಕಳತ್ತೂರು, ಮಾತೃ ಸಂಘದ ಅಧ್ಯಕ್ಷೆ ಶ್ರೀಲತಾ ಹಳೆಮನೆ, ನಿವೃತ್ತ ಮುಖ್ಯೋಪಾಧ್ಯಾಯ ಎಂ.ಎಲ್.ರಾಜೀವ, ನಿವೃತ್ತ ಅಧ್ಯಾಪಕ ಎನ್.ವಿಶ್ವನಾಥ ಆಳ್ವ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಧಾಕೃಷ್ಣ ಬೆಜಪ್ಪೆ ಹಾಗೂ ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಎಚ್.ಶಿವರಾಮ ಭಟ್ ಉಪಸ್ಥಿತರಿದ್ದು ಶುಭಹಾರೈಸಿದರು. ರಕ್ಷಕ ಶಿಕ್ಷಕ ಸಂಘ, ಮಾತೃ ಸಂಘ ಮತ್ತು ಹಳೆ ವಿದ್ಯಾಥರ್ಿ ಸಂಘಗಳ ಪ್ರತಿನಿಧಿಗಳೂ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಿ.ಮೊಗ್ರಾಲ್ ಶ್ರೀನಿವಾಸ ರಾವ್ ದತ್ತಿನಿಧಿಯಿಂದ 2017-18 ನೇ ವರ್ಷದಲ್ಲಿ 1 ರಿಂದ 6 ನೇ ತರಗತಿಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾಥರ್ಿಗಳಿಗೂ, 7 ನೇ ತರಗತಿಯಲ್ಲಿ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೂ ಮುಖ್ಯ ಅತಿಥಿಗಳು ನಗದು ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಅಧ್ಯಾಪಿಕೆ ಸುಕೇಶಿನಿ ವಿದ್ಯಾಥರ್ಿಗಳ ವಿವರ ನೀಡಿದರು.
ವಿದ್ಯಾಥರ್ಿನಿಯರು ಪ್ರಾರ್ಥನೆ ಹಾಡಿದರು. ಮುಖ್ಯೋಪಾಧ್ಯಾಯ ರಾಧಾಕೃಷ್ಣ ತುಂಗ ಕೆ.ಎಸ್. ಸ್ವಾಗತಿಸಿ, ಶಿಕ್ಷಕ ಮೋಹನ ಚಂದ್ರ ಡಿ. ವಂದಿಸಿದರು. ಅಧ್ಯಾಪಕ ಪುಷ್ಪರಾಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.