ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ
ಇಸ್ಲಾಮಾಬಾದ್: ಪಾಕಿಸ್ತಾನದ 22ನೇ ಪ್ರಧಾನಿಯಾಗಿ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಧಾನಿ ಇಸ್ಲಾಮಾಬಾದ್ ನಲ್ಲಿರುವ ಅಧ್ಯಕ್ಷರ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇಮ್ರಾನ್ ಖಾನ್ ಅವರು ವಿಶೇಷ ಆಹ್ವಾನಿತರ ಎದುರು ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಮ್ರಾನ್ ಖಾನ್ ಅವರ ಪ್ರಮಾಣವಚತನ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಹಾಗೂ ನವಜೋತ್ ಸಿಂಗ್ ಸಿಧು ಅವರಿಗೆ ಅಹ್ವಾನ ನೀಡಲಾಗಿತ್ತು, ಈ ಪೈಕಿ ಕಪಿಲ್ ದೇವ್ ಮತ್ತು ಸುನಿಲ್ ಗವಾಸ್ಕರ್ ಗೈರಾಗಿದ್ದು, ಸಿಧು ಮಾತ್ರ ಕಾರ್ಯಕ್ರಮದಲ್ಲಿ ಹಾಜರಿಯಾಗಿದ್ದರು.
ಸಿಧು ಅವರನ್ನು ಸ್ವಾಗತಿಸಿದ ಪಾಕ್ ಸೇನಾ ಮುಖ್ಯಸ್ಥರು:
ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದ ನವಜೋತ್ ಸಿಂಗ್ ಸಿಧು ಅವರನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥರಾದ ಜನರಲ್ ಖಮರ್ ಜಾವೆದ್ ಬಜ್ವಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಸಿಧು ಅವರನ್ನು ಆಲಂಗಿಸಿಕೊಂಡು ಬಜ್ವಾ ಸ್ವಾಗತ ಕೋರಿದರು.
ಕಾರ್ಯಕ್ರಮಕ್ಕೆ ಹಾಜರಾಗಿದ್ದ ಇಮ್ರಾನ್ ಖಾನ್ ಮಾಜಿ ಪತ್ನಿ:
ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ಬುಶ್ರಾ ಮನೇಕಾ ಅವರು ಕೂಡ ಆಗಮಿಸಿದ್ದರು. ತಮ್ಮ ಮಾಜಿ ಪತಿ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದ ಬುಶ್ರಾ ಸುದ್ದಿಗೆ ಕಾರಣರಾದರು.