ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ, ಪ್ರತೀ ಡಾಲರ್ ಗೆ 70.57 ರೂ
ಮುಂಬೈ: ಸತತ ಮೂರು ದಿನ ಸಾರ್ವಕಾಲಿಕ ದಾಖಲೆ ಏರಿಕೆ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಬುಧವಾರ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯ ಕೂಡ ಸಾರ್ವಕಾಲಿಕ ದಾಖಲೆ ಪ್ರಮಾಣದ ಕುಸಿತ ಕಂಡಿದೆ.
ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 173.70 ಅಂಕಗಳ ನಷ್ಟದೊಂದಿಗೆ 38,722.93 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು. ಅಂತೆಯೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 46.60 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,691.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಸಾರ್ವಕಾಲಿಕ ದಾಖಲೆ ಕುಸಿತ ಕಂಡ ರೂಪಾಯಿ
ಡಾಲರ್ ಎದುರು ರೂಪಾಯಿ ಇಂದು ವಹಿವಾಟಿನ ನಡುವೆ ಸಾರ್ವಕಾಲಿಕ ದಾಖಲೆ ಕುಸಿತ ಕಂಡಿದ್ದು, ಡಾಲರ್ ಎದುರು ರೂಪಾಯಿ ಬರೊಬ್ಬರಿ 55 ಪೈಸೆಗಳಷ್ಟು ಕುಸಿತ ಗೊಂಡ ರೂಪಾಯಿ ಮೌಲ್ಯ 70.57 ರೂ.ಗಳಿಗೆ ಕುಸಿದಿದೆ. ಆ ಮೂಲಕ ಸಾರ್ವಕಾಲಿಕ ದಾಖಲೆಯ ತಳ ಮಟ್ಟಕ್ಕೆ ರೂಪಾಯಿ ಕುಸಿದಿದೆ. ಇದೂ ಕೂಡ ಭಾರತೀಯ ಷೇರುಮಾರುಕಟ್ಟೆ ಕುಸಿತಕ್ಕೆ ಕಾರಣ ಎಂದು ವಿಶ್ಲೇಶಿಸಲಾಗಿದೆ.