ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ: ನಿಧನವೆಂಬ ವಾತರ್ೆ ಸರಿಯಲ್ಲ- ಆಸ್ಪತ್ರೆಗೆ ಮೋದಿ ಮತ್ತೆ ಭೇಟಿ
ಹೊಸದಿಲ್ಲಿ: ಮಾಜಿ ಪ್ರಧಾನಿ, ಭಾರತೀಯ ಜನತಾ ಪಕ್ಷದ ಹಿರಿಯ ನೇತಾರ ಅಟಲ್ ಬಿಹಾರಿ ವಾಜಪೇಯಿ (93) ಆರೋಗ್ಯ ಪರಿಸ್ಥಿತಿ ಇನ್ನಷ್ಟು ವಿಷಮಿಸಿದೆ. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ವೈದ್ಯರು ಎರಡು ದಿನಗಳಿಂದ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.
ವಾಜಪೇಯಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದೆ ಎಂದು ವೈದ್ಯರ ಬುಲೆಟಿನ್ನಲ್ಲಿ ತಿಳಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ 3.45ರ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಕುರಿತು ವೈದ್ಯರ ಜತೆ ಚಚರ್ಿಸಿ ಮಾಹಿತಿ ಪಡೆದುಕೊಂಡರು.
ಈ ನಡುವೆ ಗುರುವಾರ ಮಧ್ಯಾಹ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಏಮ್ಸ್ಗೆ ಭೇಟಿ ನೀಡಿ ವೈದ್ಯರ ಜತೆ ಚಚರ್ೆ ನಡೆಸಿದರು. ಕಳೆದ 24 ಗಂಟೆಗಳಲ್ಲಿ ಮೋದಿ ಅವರು ಎರಡನೇ ಭೇಟಿಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಈ ಮಧ್ಯೆ ಮೋದಿಯವರ ದಿಢೀರ್ ಭೇಟಿ ವಾಜಪೇಯಿಯವರು ಮರಣಹೊಂದಿದರೆಂಬ ಊಹಾಪೋಪಗಳಿಗೆ ಕಾರಣವಾಯಿತು. ಅಪರಾಹ್ನ ಏಮ್ಸ್ ಹೊರಡಿಸಿದ ತುತರ್ು ವರದಿಯಲ್ಲಿನ ಗಂಭೀರ ಎಂದು ಉಲ್ಲೇಖಿಸಲಾಗಿದೆ