ಜಮ್ಮು ಕಾಶ್ಮೀರ: ಹುತಾತ್ಮ ಯೋಧರಿಗೆ ಭಾರತೀಯ ಸೇನೆ ಅಂತಿಮ ನಮನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ವೇಳೆ ಹುತಾತ್ಮರಾದ ಮೇಜರ್ ಸೇರಿದಂತೆ ನಾಲ್ವರು ಭಾರತೀಯ ಯೋಧರಿಗೆ ಸೇನಾ ಪಡೆ ಅಂತಿಮ ನಮನ ಸಲ್ಲಿಸಿದೆ.
ಆಗಸ್ಟ್ 7 ರಂದು ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿತ್ತು. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದರು.
ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ:
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.
ರಫಿಯಾಬಾದ್ ನ ಲಡೂರ ಅರಣ್ಯ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ವೇಳೆ ಓರ್ವ ಯೋಧ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರದಿಂದ ನಡೆಯುತ್ತಿರುವ ಉಗ್ರರ ವಿರುದ್ಧದ ಕಾಯರ್ಾಚರಣೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ ಮತ್ತು ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.