ಮುಳಿಯಾರುಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಗಮಕ ಶ್ರಾವಣ ಕಾರ್ಯಕ್ರಮ
ಮುಳ್ಳೇರಿಯ: ಕನರ್ಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಕೇರಳ ಗಡಿನಾಡ ಘಟಕ ಕಾಸರಗೋಡು ಮತ್ತು ಸಿರಿಗನ್ನಡ ವೇದಿಕೆ ಬೆಂಗಳೂರು ಕಾಸರಗೋಡು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಗಮಕ ಶ್ರಾವಣದ ದಶಮಾನೋತ್ಸವದ ಅಂಗವಾಗಿ ಹಮ್ಮಿಕೊಂಡ ಎರಡನೇಯ ಸರಣಿ ಕಾರ್ಯಕ್ರಮವು ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಇತ್ತೀಚೆಗೆ ಸಂಪನ್ನವಾಯಿತು. ಕ್ಷೇತ್ರ ಪ್ರಬಂಧಕ ಸೀತಾರಾಮ ಬಳ್ಳುಳ್ಳಾಯ ಇವರು ದೀಪಜ್ವಲನ ಮಾಡಿ ಶುಭ ಹಾರೈಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪರಿಷತ್ತಿನ ಅಧ್ಯಕ್ಷ ಟಿ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಬಾಲಕೃಷ್ಣ ಅಗ್ಗಿತ್ತಾಯ ಶುಭಾಶಂಸನೆಗೈದರು. ಸಂಪನ್ಮೂಲ ವ್ಯಕ್ತಿಗಳಾದ ಶಿವರಾಮ ಭಟ್ ಚಿತ್ತಾರಿ ವಾಚಕರಾಗಿಯೂ, ವಿ ಬಿ ಕುಳಮರ್ವ ವ್ಯಾಖ್ಯಾನಗಾರರಾಗಿಯೂ ಗಮಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು. ವಿ ಬಿ ಕುಳಮರ್ವ ವಿರಚಿತ "ಕುಮಾರ ಚರಿತ್ರೆ" ಯಿಂದ ಆಯ್ದ ಭಾಗವನ್ನು ಪ್ರಸ್ತುತಪಡಿಸಲಾಯಿತು. ಗೋವಿಂದ ಬಳ್ಳಮೂಲೆ ಪ್ರಸ್ಥಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪೆರಡಂಜಿ ಗೋಪಾಲಕೃಷ್ಣ ಭಟ್ ವಂದಿಸಿದರು. ಈ ಸಂದರ್ಭದಲ್ಲಿ ಸೀತಾರಾಮ ಬಳ್ಳುಳ್ಳಾಯ ಇವರು ಅಭ್ಯಾಗತ ಅತಿಥಿಗಳನ್ನು ಶಾಲು ಹೊದೆಸಿ ಗೌರವಿಸಲಾಯಿತು. ನಿವೃತ್ತ ಜಿಲ್ಲಾ ಶಿಕ್ಷಣ ಅಧಿಕಾರಿ ಲಲಿತಾಲಕ್ಷ್ಮಿ ಕುಳಮರ್ವ ಉಪಸ್ಥಿತರಿದ್ದರು.