HEALTH TIPS

No title

                              ನೀವು ಕೇಳ್ತಾ ಇದ್ದೀರ...ಮಹಾಜನ ವಾಣಿ ಬಾನುಲಿ
                               `ಮಹಾಜನ ವಾಣಿ' ಬಾನುಲಿ ಕೇಂದ್ರಕ್ಕೆ ಚಾಲನೆ
     ಬದಿಯಡ್ಕ: ವಿದ್ಯಾರ್ಜನೆಯ ಹಂತದಲ್ಲಿಯೇ ಮಕ್ಕಳಿಗೆ ಭವಿಷ್ಯದ ಕಡೆಗೆ ಸ್ಪಷ್ಟವಾದ ಗುರಿ ಇರಬೇಕು. ಅದನ್ನು ಸಾಧಿಸುವ ಛಲವೂ ಬದ್ಧತೆಯೂ ಇರಬೇಕು. ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಂಡರೆ ಜೀವನದಲ್ಲಿ ಸಾಧನೆಯ ಹೆಜ್ಜೆಗಳನ್ನು ಇಡಲು ಸಹಕಾರಿಯಾಗಬಹುದು ಎಂದು ಮಂಗಳೂರು ಆಕಾಶವಾಣಿ ಕೇಂದ್ರದ ಉಪನಿದರ್ೇಶಕಿ ಡಾ.ಮಾಲತಿ ಆರ್. ಭಟ್ ಅಭಿಪ್ರಾಯಪಟ್ಟರು.
   ಗುರುವಾರ ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡ `ಮಹಾಜನ ವಾಣಿ' ಬಾನುಲಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
   ಒಂದು ಕಾಲದಲ್ಲಿ ನಾಡಿನಾದ್ಯಂತ ಮಾಹಿತಿ ವಿನಿಮಯದ ಏಕೈಕ ಮಾಧ್ಯಮವಾಗಿದ್ದ ಬಾನುಲಿ(ರೇಡಿಯೋ) ಪ್ರಸ್ತುತ ಹೊಸರೂಪದಲ್ಲಿ ಪ್ರಸ್ತುತಿಗೊಳ್ಳುತ್ತಾ ನಗರ ಗ್ರಾಮೀಣ ಜನರಿಗೆ ಮನರಂಜನೆ ನೀಡುತ್ತಿದೆ. ಅಂತಹ ವ್ಯವಸ್ಥೆಯನ್ನು ತಮ್ಮ ಪರಿಧಿಯೊಳಗೆ ಸಮರ್ಪಕವಾಗಿ ಉಪಯೋಗಿಸಿಕೊಳ್ಳಲು ಪ್ರಯತ್ನಿಸುವ ವಿದ್ಯಾಥರ್ಿಗಳಿಗೆ ಭವಿಷ್ಯ ಉತ್ತಮವಾಗಿ ಸಾಕಾರಗೊಳ್ಳಲಿ ಎಂದು ಹಾರೈಸಿದರು. 
   ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಸಭೆಯ ಅಧ್ಯಕ್ಷತೆ ವಹಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಮತ್ತು ಶಾಲಾ ಶಿಕ್ಷಕಿ ವಾಣಿ ಪಿ.ಎಸ್ ಶುಭಹಾರೈಸಿದರು. ವಿದ್ಯಾಥರ್ಿನಿ ಶರಣ್ಯ.ಪಿ.ಜೆ ಪ್ರಾಸ್ತಾವಿಕವಾಗಿ ಮಾತನಾಡಿದಳು.  ವಿದ್ಯಾಥರ್ಿಗಳಾದ ಸಂಪತ್.ಕೆ ಸ್ವಾಗತಿಸಿ, ವಿಲ್ಸನ್ ಶರುಣ್ ಕ್ರಾಸ್ತಾ ವಂದಿಸಿದರು.    ವರಲಕ್ಷ್ಮಿ.ಎನ್ ಕಾರ್ಯಕ್ರಮ ನಿರೂಪಿಸಿದಳು.
   ಮಹಾಜನ ವಾಣಿ ಬಾನುಲಿಯ ಬಗ್ಗೆ:
   ಮಹಾಜನ ವಾಣಿ ಬಾನುಲಿಯು ಶಾಲಾ ವಿದ್ಯಾಥರ್ಿಗಳ ಸಾಹಿತ್ಯ ಸಂಘದ ಆಶ್ರಯದಲ್ಲಿ ಕಾರ್ಯನಿರ್ವಹಿಸಲಿದ್ದು, ಪ್ರತಿನಿತ್ಯ 15 ನಿಮಿಷಗಳ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಿದೆ. ಆರಂಭಿಕ ಹಂತದ ಈ ವಿನೂತನ ಯೋಜನೆಯಲ್ಲಿ ಶಾಲೆಯ ಎಲ್ಲಾ ತರಗತಿ ಕೊಠಡಿಗಳಿಗೆ ವಿಶೇಷ ಧ್ವನಿವರ್ಧಕದ ಮೂಲಕ ಪ್ರಸಾರ ಮಾಡಲಾಗುತ್ತದೆ. ಹಾಡುಗಾರಿಕೆ, ವಾತರ್ೆ ಸಹಿತ ವಿವಿಧ ವೈವಿಧ್ಯತೆಗಳ ಕಾರ್ಯಕ್ರಮ ಸಂಯೋಜನೆಯಲ್ಲಿ ಮೂಡಿಬರಲಿರುವ ವಿದ್ಯಾಥರ್ಿ ಬಾನುಲಿಯು ಜಿಲ್ಲೆಯ ಮೊತ್ತಮೊದಲ ಬಾನುಲಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕವಾಗಿಯೂ ಬಾನುಲಿ ಆಲಿಸುವ ಅವಕಾಶಗಳ ಬಗ್ಗೆ ಯೋಜನೆ ಸಿದ್ದಪಡಿಸಲಾಗುತ್ತಿದ್ದು, ಶಿಕ್ಷಕರಾದ ವಿಶ್ವನಾಥ ಭಟ್, ರವಿಶಂಕರ ದೊಡ್ಡಮಾಣಿ, ಅವಿನಾಶ ಕಾರಂತ ಎಂ, ಶಿಕ್ಷಕಿ ವಾಣಿ ಪಿ.ಎಸ್ ಮೊದಲಾದ ಶಿಕ್ಷಕ ವೃಂದ ವಿದ್ಯಾಥರ್ಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries