ಆರ್ ಎಸ್ಎಸ್ ನಿಂದ ರಾಹುಲ್ ಗಾಂಧಿಗೆ ಯಾವುದೇ ಆಹ್ವಾನ ಬಂದಿಲ್ಲ: ಕಾಂಗ್ರೆಸ್
ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ ಎಂಬ ವಿಚಾರ ಸುಳ್ಳಾಗಿದ್ದು, ಈ ವರೆಗೂ ತಮಗೆ ಯಾವುದೇ ರೀತಿಯ ಆಹ್ವಾನ ಬಂದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಅವರು, ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ ಎಂಬ ಸುದ್ದಿಯನ್ನು ನಾವು ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇವೆ. ಆದರೆ ತಮಗೆ ಈ ವರೆಗೂ ಅಂತಹ ಯಾವುದೇ ಆಹ್ವಾನ ಬಂದಿಲ್ಲ. ಹೀಗಾಗಿ ಈ ಬಗ್ಗೆ ಈಗಲೇ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
'ಕೇವಲ ಊಹಾಪೋಹಗಳಿಗೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಸ್ತುತ ಕೇವಲ ಊಹೆ ಎಂಬುದು ನನ್ನ ಭಾವನೆ. ಆದರೆ ನಮಗೆ ಅಧಿಕೃತ ಆಹ್ವಾನ ಸಿಕ್ಕಾಗ ಮಾತ್ರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇವೆ. ಆಹ್ವಾನ ದೊರೆತ ಬಳಿಕ ಅದರ ಸ್ವೀಕಾರ ಅಥವಾ ತಿರಸ್ಕಾರದ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.
ಸೋಮವಾರ ಮಾಧ್ಯಮಗಳು ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗಿದೆ ಎಂದು ವರದಿ ಮಾಡಿದ್ದವು. ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪಾಲ್ಗೊಳ್ಳುವ ಮೂರು ದಿನಗಳ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗಿದೆ ಎಂದು ವರದಿ ಮಾಡಲಾಗಿತ್ತು.