ಅತ್ಯಾಚಾರವನ್ನು ಸಹಿಸಲು ಸಾಧ್ಯವಿಲ್ಲ: ಅತ್ಯಾಚಾರಿಗಳಿಗೆ ಖಡಕ್ ಸಂದೇಶ ರವಾನಿಸಿದ ಪ್ರಧಾನಿ ಮೋದಿ!
ನವದೆಹಲಿ: ಅತ್ಯಾಚಾರವನ್ನು ಸಹಿಸಲು ಸಾಧ್ಯವಿಲ್ಲ. ಮಹಿಳೆಯರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಮನ್ ಕಿ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾ ಬಂಧನ ಪ್ರಯುಕ್ತ ಮಹಿಳೆಯರಿಗೆ ಶುಭಾಶಯ ಕೋರಿದರು. ಇದೇ ವೇಳೆ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ಕಿಡಿಕಾರಿರುವ ಪ್ರಧಾನಿ ಮೋದಿ ಅವರು ಅತ್ಯಾಚಾರಿಗಳಿಗೆ ಖಡಕ್ ಸಂದೇಶವನ್ನು ರವಾನಿಸಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರಗಳನ್ನು ಸಹಿಸಲು ಸಾಧ್ಯವಿಲ್ಲ. ಮಹಿಳೆಯರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಮೋದಿ ಅವರು ಹೇಳಿದ್ದಾರೆ.
ಇದೇ ವೇಳೆ ತ್ರಿವಳಿ ತಲಾಖ್ ಬಗ್ಗೆ ಮಾತನಾಡಿದ ಮೋದಿಯವರು, ತ್ರಿವಳಿ ತಲಾಖ್ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದರು, ರಾಜ್ಯಸಭೆಯಲ್ಲಿ ಈವರೆಗೂ ಅಂಗೀಕಾರಗೊಂಡಿಲ್ಲ. ಆದರೆ, ಮುಸ್ಲಿಂ ಮಹಿಳೆಯರಿಗೆ ಒಂದು ಭರವಸೆಯನ್ನು ನಾನು ನೀಡಬಲ್ಲೆ ಇಡೀ ದೇಶ ನಿಮ್ಮೊಂದಿಗಿದೆ. ಶೀಘ್ರದಲ್ಲಿಯೇ ಮುಸ್ಲಿಂ ಮಹಿಳೆಯರಿಗೆ ನ್ಯಾಯ ದೊರೆಯಲಿದೆ ಎಂದಿದ್ದಾರೆ.