HEALTH TIPS

No title

       ನಮ್ಮ ಯಶಸ್ಸಿನ ಮೂಲ ಕೇರಳ- ಸಂಕಷ್ಟದಲ್ಲಿ ನೆರವಾಗುವುದು ನಮ್ಮ ಕರ್ತವ್ಯ: ಯುಎಇ
    ಅಬುದಾಬಿ: ಕೇರಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ದೇಶ ಮಾತ್ರವಲ್ಲದೇ ವಿಶ್ವದ ಗಮನವನ್ನೂ ಕೂಡ ಸೆಳೆದಿದ್ದು, ಪ್ರವಾಹ ಪೀಡಿತ ಕೇರಳಕ್ಕೆ ನೆರವು ನೀಡುವುದಾಗಿ ಯುಎಇ ಸಕರ್ಾರ ಘೋಷಿಸಿದೆ.
   ಈ ಬಗ್ಗೆ ಸ್ವತಃ ಯುಎಇ ಅದ್ಯಕ್ಷರಾದ ಶೇಖ್ ಖಲೀಫಾ ಅವರು ಪ್ರತಿಕ್ರಿಯಿಸಿದ್ದು, ಕೂಡಲೇ ಕೇರಳ ನಿರಾಶ್ರಿತರಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ ಈ ಸಂಬಂಧ ಸಮಿತಿಯೊಂದನ್ನು ರಚನೆ ಮಾಡುವಂತೆಯೂ ಸೂಚಿಸಿದ್ದಾರೆ ಎನ್ನಲವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಯುಎಇ ಉಪಾಧ್ಯಕ್ಷ ಶೇಖ್ ಮೊಹಮದ್ ಬಿನ್ ರಷೀದ್ ಅಲ್ ಮಕ್ತೌಮ್ ಅವರು, ಕೇರಳಕ್ಕೆ ಸಂಬಂಧಿಸಿದಂತೆ ನಮ್ಮ ರಾಷ್ಟ್ರ ವಿಶೇಷ ಕಾಳಜಿ ಹೊಂದಿದೆ. ಪ್ರವಾಹ ಪೀಡಿತ ಕೇರಳ ಸಂಕಷ್ಟದಲ್ಲಿದ್ದು, ನೆರವು ನಮ್ಮ ಕರ್ತವ್ಯ. ಕೇರಳ ನಮ್ಮ ಯಶಸ್ಸಿನ ಮೂಲ ಎಂದು ಅವರು ಹೇಳಿದ್ದಾರೆ.
   ಹಿಂದಿನಿಂದಲೂ ಕೇರಳಿಗರು ನಮ್ಮ ದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಕೂಡ ಗಣನೀಯ. ಹೀಗಾಗಿ ಕೇರಳಕ್ಕೆ ನೆರವು ನೀಡುವುದು ನಮ್ಮ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
      ಜಲ ಪ್ರಳಯದಿಂದ ತತ್ತರಿಸಿದ ಕೇರಳಕ್ಕೆ ನೆರವಿನ ಮಹಾಪೂರ
  ಶತಮಾನದ ಅತ್ಯಂತ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳದಲ್ಲಿ ಈವರೆಗೂ 324  ಮಂದಿ ಬಲಿಯಾಗಿದ್ದು, 1924ರಿಂದ ಆಚೆಗೆ ದಾಖಲಾದ ಅತೀ ಭೀಕರ ಮಟ್ಟದ ಪ್ರವಾಹದ ಪರಿಸ್ಥಿತಿ ಇದಾಗಿದೆ. 500 ಕೋಟಿ ರುಗಳ ತುತರ್ು ಪರಿಹಾರವನ್ನು ಪ್ರಧಾನಿ ಅದಾಗಲೇ ಘೋಷಿಸಿದ್ದಾರೆ. ರಾಜ್ಯದ 12 ಜಿಲ್ಲೆಗಳಲ್ಲಿ ರೆಡ್ ಅಲಟರ್್ ಘೋಷಿಸಲಾಗಿದೆ. ಇದೀಗ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತೊಮ್ಮೆ ಕೆಂಪು ಅಲಟರ್್ ಘೋಷಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries